ಕಾಶ್ಮೀರದಲ್ಲಿ ಇಬ್ಬರು ಉಗ್ರರನ್ನು ಸದೆಬಡಿದ ಭಾರತೀಯ ಸೇನೆ

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯ ಗಡಿ ನಿಯಂತ್ರಣ ರೇಖೆಯುದ್ದಕ್ಕೂ ಒಳನುಸುಳುವಿಕೆ ಯತ್ನವನ್ನು ವಿಫಲಗೊಳಿಸಿದ ಸೇನಾ ಪಡೆ, ಬುಧವಾರ ಇಬ್ಬರು ಉಗ್ರರರನ್ನು ಹೊಡೆದುರುಳಿಸಿದೆ. ಇಂದು ಪೂಂಚ್ ಜಿಲ್ಲೆಯಲ್ಲಿ ಯೋಧರೊಂದಿಗೆ ನಡೆದ ಭೀಕರ ಗುಂಡಿನ ಚಕಮಕಿಯಲ್ಲಿ ಇಬ್ಬರು ಭಯೋತ್ಪಾದಕರು ಹತರಾಗಿದ್ದಾರೆ ಎಂದು ರಕ್ಷಣಾ ವಕ್ತಾರರು ತಿಳಿಸಿದ್ದಾರೆ.

ಒಬ್ಬ ಭಯೋತ್ಪಾದಕನ ಶವವನ್ನು ವಶಪಡಿಸಿಕೊಳ್ಳಲಾಗಿದ್ದು, ಎರಡನೆಯವನ ದೇಹಕ್ಕಾಗಿ ಶೋಧ ಕಾರ್ಯಾಚರಣೆ ನಡೆಯುತ್ತಿದೆ ಎಂದು ಜಮ್ಮು ಮೂಲದ ರಕ್ಷಣಾ PRO ಲೆಫ್ಟಿನೆಂಟ್ ಕರ್ನಲ್ ಸುನೀಲ್ ಬರ್ತ್ವಾಲ್ ಹೇಳಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!