ಹೊಸದಿಗಂತ ಡಿಜಿಟಲ್ ಡೆಸ್ಕ್:
ಭಾರತೀಯ ಸೇನೆಯಲ್ಲಿ 24 ಗ್ರೂಪ್ ಸಿ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.
10ನೇ ತರಗತಿ ವಿದ್ಯಾರ್ಹತೆ ಜೊತೆಗೆ ಅಕ್ಟೋಬರ್ 8,2023ರ ಅನ್ವಯ ಕನಿಷ್ಟ 18 ರಿಂದ ಗರಿಷ್ಟ 25 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ, ವೈದ್ಯಕೀಯ ಪರೀಕ್ಷೆ, ದಾಖಲೆ ಪರಿಶೀಲನೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು. ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 18,000/- ರಿಂದ 63,200/-ರೂಗಳ ವರೆಗೆ ವೇತನವನ್ನು ನೀಡಲಾಗುವುದು.
ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅಕ್ಟೋಬರ್ 8,2023ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.