ಹೊಸದಿಗಂತ ಡಿಜಿಟಲ್ ಡೆಸ್ಕ್:
ಜಮ್ಮುವಿನ ಪೂರ್ವ ಲಡಾಖ್‌ನ ಡೆಮ್‌ಚೋಕ್ ಮತ್ತು ಡೆಪ್ಸಾಂಗ್ ಎರಡೂ ಪ್ರದೇಶಗಳಲ್ಲಿ ಭಾರತೀಯ ಸೇನೆಯ ಗಸ್ತು ಪುನರಾರಂಭವಾಗಿದೆ ಎಂದು ವಿದೇಶಾಂಗ ಸಚಿವಾಲಯ ಇಂದು (ಗುರುವಾರ) ದೃಢಪಡಿಸಿದೆ.
ಪತ್ರಿಕಾಗೋಷ್ಠಿಯಲ್ಲಿ ಪ್ರಶ್ನೆಗೆ ಉತ್ತರಿಸಿದ ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರ ರಣಧೀರ್ ಜೈಸ್ವಾಲ್, ಚೀನಾದೊಂದಿಗಿನ ಒಪ್ಪಂದದ ನಂತರ ಡೆಮ್‌ಚೋಕ್ ಮತ್ತು ಡೆಪ್ಸಾಂಗ್ ಎರಡರಲ್ಲೂ ಗಸ್ತು ಪುನರಾರಂಭವಾಗಿದೆ ಎಂದು ಹೇಳಿದರು.
ಈ ವೇಳೆ ಕೆಲವು ಚೆಕ್‌ಪೋಸ್ಟ್‌ಗಳಿಗೆ ಗಸ್ತು ತಿರುಗಲು ಅವಕಾಶವಿಲ್ಲ ಎಂಬ ಮಾಧ್ಯಮ ವರದಿಗಳನ್ನು ಅವರು ತಿರಸ್ಕರಿಸಿದರು. ಭಾರತೀಯ ಸೇನೆಯು ಡೆಪ್ಸಾಂಗ್ ಮತ್ತು ಡೆಮ್‌ಚೋಕ್‌ನಲ್ಲಿರುವ ಎಲ್ಲಾ ಚೆಕ್‌ಪೋಸ್ಟ್‌ಗಳಲ್ಲಿ ಗಸ್ತು ತಿರುಗಲು ಪ್ರಾರಂಭಿಸಿದೆ ಎಂದು ಹೇಳಿದ್ದಾರೆ.