ಹೊಸದಿಗಂತ ಡಿಜಿಟಲ್ ಡೆಸ್ಕ್:
ಲೋಕಸಭೆಯಲ್ಲಿ ಆಪರೇಷನ್ ಸಿಂದೂರ್ ಹಾಗೂ ಪಹಲ್ಗಾಮ್ ದಾಳಿ ಕುರಿತು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮಾತನಾಡಿದ್ದಾರೆ.
ಲೋಕಸಭೆಯಲ್ಲಿ ಆಪರೇಷನ್ ಸಿಂದೂರ್ ಕಾರ್ಯಾಚರಣೆ ಸಾಧನೆಯನ್ನು ಪ್ರಧಾನಿ ನರೇಂದ್ರ ಮೋದಿ ಅವರು ಕೊಂಡಾಡಿದ್ದಾರೆ.
ಇಂದು ಲೋಕಸಭೆಯಲ್ಲಿ ಚರ್ಚೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಆಪರೇಷನ್ ಸಿಂದೂರ ಮೂಲಕ ಭಾರತದ ಸೇನೆ ಶೌರ್ಯ ಪ್ರದರ್ಶಿಸಿದೆ ಎಂದು ಹೇಳಿದರು.
ಈ ಅಧಿವೇಶನವು ಭಾರತದ ವಿಜಯೋತ್ಸವದ ಅಧಿವೇಶನವಾಗಿದೆ. ಸೇನೆ ಅಗ್ರರ ನೆಲೆಗಳನ್ನು ಧ್ವಂಸಗೊಳಿಸಿದೆ. ಆಪರೇಷನ್ ಸಿಂದೂರ ಯಶಸ್ವಿಯಾಗಿ ನಡೆಸಿದ ಭಾರತೀಯ ಸೇನೆಗೆ ಇಡೀ ದೇಶದ ಪರವಾಗಿ ಧನ್ಯವಾದಗಳನ್ನು ತಿಳಿಸಿದರು.