ಹೊಸದಿಗಂತ ಡಿಜಿಟಲ್ ಡೆಸ್ಕ್:
ಬೀದರ್‌ನ ಭಾಲ್ಕಿ ತಾಲೂಕಿನ ಹೊನ್ನಿಕೇರಿ ಅರಣ್ಯ ಪ್ರದೇಶದಲ್ಲಿ ಪತಿಯೊಬ್ಬ ತನ್ನ ಪತ್ನಿಯನ್ನು ಕಬ್ಬಿಣದ ರಾಡ್‌ನಿಂದ ಹೊಡೆದು ಭೀಕರವಾಗಿ ಕೊಲೆ ಮಾಡಿದ್ದ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಇಂದು ಬಂಧಿಸಲಾಗಿದೆ.
ಬೀದರ್ ತಾಲೂಕಿನ ಹೊನ್ನಿಕೇರಿ ಗ್ರಾಮದ ಸಂಜನಾ (26) ಮೃತಪಟ್ಟ ಮಹಿಳೆ. ಕೊಲೆ ಆರೋಪದ ಮೇಲೆ ಭಾರತೀಯ ಸೇನೆಯ ಸೈನಿಕನನ್ನು ಬಂಧಿಸಲಾಗಿದೆ. ಆರೋಪಿಯನ್ನು ಭಗವತ್ ಜ್ಞಾನೇಶ್ವರ್ ಎಂದು ಗುರುತಿಸಲಾಗಿದೆ.
ಭಾಲ್ಕಿ ತಾಲ್ಲೂಕಿನ ಬೋಲೆಗಾವೊ ಗ್ರಾಮದ ನಿವಾಸಿ ಮತ್ತು ಇತ್ತೀಚೆಗೆ ಜೋಧ್‌ಪುರದಿಂದ ಸಿಕಂದರಾಬಾದ್‌ಗೆ ವರ್ಗಾವಣೆಗೊಂಡ ಸೈನಿಕ ಭಾಗವತ್ ಜೂನ್ 25 ರಂದು 10 ದಿನಗಳ ರಜೆಯ ಮೇಲೆ ಮನೆಗೆ ಬಂದಿದ್ದರು. ಅದೇ ರಾತ್ರಿ, ತನ್ನ ಪತ್ನಿಯನ್ನು ಕಾರಿನಲ್ಲಿ ಕರೆದುಕೊಂಡು ಹೋಗಿ, ಆಕೆಯ ಪೋಷಕರ ಮನೆಗೆ ಭೇಟಿ ನೀಡುವುದಾಗಿ ಮತ್ತು ದಾರಿಯಲ್ಲಿ ದೇವಾಲಯಗಳಿಗೆ ತೆರಳಿ ಪ್ರಾರ್ಥನೆ ಸಲ್ಲಿಸುವುದಾಗಿ ಹೇಳಿದ್ದರು.
ಪೊಲೀಸರು ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ಸದ್ಯ ಬೀದರ್ ನಗರದ ಶಿವನಗರದಲ್ಲಿ ಪತ್ನಿಯೊಂದಿಗೆ ವಾಸವಾಗಿದ್ದ ಎನ್ನಲಾಗಿದೆ. ಎರಡು ವರ್ಷಗಳ ಹಿಂದೆ ಸಂಜನಾ ಮತ್ತು ಭಗವತ್ ವಿವಾಹವಾಗಿತ್ತು. ಭಗವತ್ ಪಕ್ಕದ ಮನೆಯ ಹುಡುಗಿಯ ಜತೆ ಅನೈತಿಕ ಸಂಬಂಧ ಇಟ್ಟುಕೊಂಡಿದ್ದನ್ನು ಸಂಜನಾ ಪ್ರಶ್ನಿಸಿದ ಕಾರಣ ಕೊಲೆ ಮಾಡಿದ್ದಾರೆ ಎನ್ನಲಾಗಿದೆ.



