RECRUITMENT | ಇಂಡಿಯನ್‌ ಬ್ಯಾಂಕ್‌ ನಲ್ಲಿ 203 ಸ್ಪೆಷಲಿಸ್ಟ್‌ ಆಫೀಸರ್‌ ಹುದ್ದೆಗಳಿಗೆ ಅರ್ಜಿ ಆಹ್ವಾನ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌ :

ಇಂಡಿಯನ್‌ ಬ್ಯಾಂಕ್‌ ನಲ್ಲಿ 203 ಸ್ಪೆಷಲಿಸ್ಟ್‌ ಆಫೀಸರ್‌ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.

ಈ ಹುದ್ದೆಗಳಿಗೆ ಸಿಎ/ಐಸಿಡಬ್ಲ್ಯೂಎ, ಎಂಬಿಎ, ಪದವಿ, ಎಂಎಂಎಸ್‌, ಪಿಜಿಡಿಬಿಎ, ಬಿ.ಇ/ಬಿ.ಟೆಕ್‌, ಸ್ನಾತಕೋತ್ತರ ಪದವಿ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ಸ್ಪೆಷಲಿಸ್ಟ್‌ ಆಫೀಸರ್‌ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 36,000/- ರಿಂದ 89,890/-ರೂಗಳ ವರೆಗೆ ವೇತನವನ್ನು ನೀಡಲಾಗುವುದು.

ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿದಾರರು 850/-ರೂ ಮತ್ತು ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ/ಅಂಗವಿಕಲ ಅಭ್ಯರ್ಥಿಗಳು 175/-ರೂ ಅರ್ಜಿ ಶುಲ್ಕವನ್ನು ಆನ್‌ಲೈನ್‌ ಮೂಲಕ ಪಾವತಿಸಬೇಕಿರುತ್ತದೆ.

ಅರ್ಹ ಅಭ್ಯರ್ಥಿಗಳು ಆನ್‌ಲೈನ್‌ ಮೂಲಕ ಫೆಬ್ರವರಿ 28,2023ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!