ಭಾರತೀಯ ಕರಾವಳಿ ಭದ್ರತಾ ಪಡೆಯಲ್ಲಿ 255 ನಾವಿಕ ಹುದ್ದೆಗಳ ನೇಮಕಾತಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌ :

ಭಾರತೀಯ ಕರಾವಳಿ ಭದ್ರತಾ ಪಡೆಯಲ್ಲಿ 255 ನಾವಿಕ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಅಭ್ಯರ್ಥಿಗಳು ಆನ್‌ಲೈನ್‌ ಮೂಲಕ ಫೆಬ್ರವರಿ 16,2023ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

10ನೇ ತರಗತಿ ಮತ್ತು 12ನೇ ತರಗತಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್‌/ಸಂಸ್ಥೆ/ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ನಾವಿಕ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 21,700/-ರೂ ವೇತನವನ್ನು ನೀಡಲಾಗುವುದು.

ಕನಿಷ್ಟ 18 ರಿಂದ ಗರಿಷ್ಟ 22 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

ಅರ್ಜಿದಾರರು 300/-ರೂ ಅರ್ಜಿ ಶುಲ್ಕವನ್ನು ಆನ್‌ಲೈನ್‌ ಮೂಲಕ ಪಾವತಿಸಬೇಕಿರುತ್ತದೆ. ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ.

ಅರ್ಜಿದಾರರು ಆನ್‌ಲೈನ್‌ ಮೂಲಕ ಫೆಬ್ರವರಿ 16,2023ರೊಳಗೆ ಅರ್ಜಿಯನ್ನು ಹಾಕಬಹುದು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!