ಹೊಸದಿಗಂತ ಡಿಜಿಟಲ್ ಡೆಸ್ಕ್:
ಇಂದಿನಿಂದ ರಾಜ್ಯದ ಎಲ್ಲಾ ಶಾಲಾ-ಕಾಲೇಜುಗಳಲ್ಲಿ ‘ಸಂವಿಧಾನ ಪೀಠಿಕೆ’ ಓದುವುದು ಕಡ್ಡಾಯವಾಗಿದೆ.
ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನದ ಅಂಗವಾಗಿ ಇಂದು ಬೆಳಗ್ಗೆ 10 ಗಂಟೆಗೆ ವಿಧಾನಸೌಧದ ಮುಂಭಾಗ ಸಂವಿಧಾನ ಪೀಠಿಕೆ ಓದುವ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಸಮಾಜ ಕಲ್ಯಾಣ ಸಚಿವರ ನೇತೃತ್ವದಲ್ಲಿ ಭಾರತ ಸಂವಿಧಾನದ ಪೀಠಿಕೆಯನ್ನು ಏಕಕಾಲದಲ್ಲಿ ಓದುವ ಕಾರ್ಯಕ್ರಮ ನಡೆಯಲಿದೆ.
ರಾಜ್ಯದ ಎಲ್ಲಾ ಶಾಲಾ ಕಾಲೇಜುಗಳಲ್ಲಿ ಭಾರತ ಸಂವಿಧಾನದ ಪೀಠಿಕೆಯನ್ನು ಫಲಕದಲ್ಲಿ ಅವಳಡಿಸಬೇಕೆಂದು ಕಾಲೇಜು ಶಿಕ್ಷಣ ಇಲಾಖೆ ತಿಳಿಸಿತ್ತು. ಅದರಂತೆ ಇಂದಿನಿಂದ ರಾಜ್ಯದ ಶಾಲಾ ಕಾಲೇಜುಗಳಲ್ಲಿ ಸಂವಿಧಾನ ಓದು ಆರಂಭಗೊಳ್ಳಲಿದೆ. ಈ ಕಾರ್ಯಕ್ರಮವನ್ನು ಮಕ್ಕಳಲ್ಲಿ ಸಂವಿಧಾನದ ಉದ್ದೇಶವನ್ನು ಅರ್ಥೈಸುವ ನಿಟ್ಟಿನಲ್ಲಿ ಆಯೋಜಿಸಲಾಗುತ್ತಿದೆ.
ಕೇವಲ ಶಾಲಾ ಕಾಲೇಜುಗಳಿಗೆ ಮಾತ್ರವಲ್ಲದೆ ಸರ್ಕಾರಿ ಕಚೇರಿಗಳಲ್ಲೂ ಇದು ಅನ್ವಯವಾಗಲಿದೆ. ಸಿಎಂ ಕಚೇರಿಯಲ್ಲೂ ಇದನ್ನು ಓದಬೇಕು. ಜಿಲ್ಲಾ, ತಾಲೂಕು, ಗ್ರಾಮ ಪಂಚಾಯಿತಿಗಳಲ್ಲೂ ಸಂವಿಧಾನ ಪೀಠಿಕೆಯನ್ನು ಜಾರಿಗೊಳಿಸಲಾಗುತ್ತಿದೆ. ಎಲ್ಲಾ ಸರ್ಕಾರಿ ಕಚೇರಿಗಳಲ್ಲಿ ಸಂವಿಧಾನದ ಪೀಠಿಕೆ ಫೋಟೋ ಹಾಕಲು ಸರ್ಕಾರ ಸೂಚಿಸಿರುವುದಾಗಿ ತಿಳಿಸಿದೆ.