September 25, 2026
Friday, September 25, 2026
spot_img

ವೃದ್ಧಾಶ್ರಮದಲ್ಲಿ ಭಾರತೀಯ ಕ್ರಿಕೆಟಿಗ ವಿನೋದ್ ಕಾಂಬ್ಳಿ: ಚರ್ಚೆಗೆ ಕಾರಣವಾಗಿದೆ ವೈರಲ್ ವಿಡಿಯೋ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಮಾಜಿ ಭಾರತೀಯ ಕ್ರಿಕೆಟಿಗ ವಿನೋದ್ ಕಾಂಬ್ಳಿ ಅವರದ್ದು ಎನ್ನಲಾದ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗಿದ್ದು, ಅವರು ವೃದ್ಧಾಶ್ರಮದಲ್ಲಿ ಕಾಣಿಸಿಕೊಂಡಿರುವುದು ಇದೀಗ ಚರ್ಚೆಗೆ ಕಾರಣವಾಗಿದೆ.

ವೈರಲ್ ಆಗಿರುವ ವಿಡಿಯೋದಲ್ಲಿ ಕಾಂಬ್ಳಿ ಅವರು ಆ ಕೇರ್ ಸೆಂಟರ್‌ನಲ್ಲಿರುವ ಸ್ವಚ್ಛತೆ ಹಾಗೂ ಅಲ್ಲಿನ ಸೌಲಭ್ಯಗಳ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಇಲ್ಲಿನ ವಾತಾವರಣ ತಮಗೆ ಮನೆಯಲ್ಲಿರುವ ಅನುಭವ ನೀಡುತ್ತಿದೆ. ಕೇರ್ ಸೆಂಟರ್‌ನಲ್ಲಿ ತಮಗೆ ಉತ್ತಮ ರೀತಿಯಲ್ಲಿ ಆರೈಕೆ ದೊರೆಯುತ್ತಿದ್ದು, ಅಲ್ಲಿನ ಜನರು ಪ್ರೀತಿ ಹಾಗೂ ಗೌರವದಿಂದ ನೋಡಿಕೊಳ್ಳುತ್ತಿದ್ದಾರೆ ಎಂದು ಕಾಂಬ್ಳಿ ಹೇಳುತ್ತಿರುವುದು ದಾಖಲಾಗಿದೆ. ಜೊತೆಗೆ ಅಲ್ಲಿನ ವ್ಯವಸ್ಥೆ ಮತ್ತು ಸೌಲಭ್ಯಗಳ ಬಗ್ಗೆಯೂ ಅವರು ಸಕಾರಾತ್ಮಕವಾಗಿ ಮಾತನಾಡಿರುವುದು ವಿಡಿಯೋದಲ್ಲಿ ಕಂಡುಬಂದಿದೆ.

ಇದನ್ನೂ ಓದಿ:

ಕ್ರಿಕೆಟ್‌ ಕ್ಷೇತ್ರದಲ್ಲಿ ಒಂದು ಕಾಲದಲ್ಲಿ ಪ್ರಮುಖ ಆಟಗಾರನಾಗಿ ಗುರುತಿಸಿಕೊಂಡಿದ್ದ ವಿನೋದ್ ಕಾಂಬ್ಳಿ ಅವರ ಈ ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಹಲವರ ಗಮನ ಸೆಳೆದಿದೆ. ವಿಡಿಯೋವನ್ನು ಹಂಚಿಕೊಳ್ಳುತ್ತಿರುವ ಹಲವರು ಕಾಂಬ್ಳಿ ಅವರ ಆರೋಗ್ಯ ಮತ್ತು ಪ್ರಸ್ತುತ ಜೀವನದ ಕುರಿತು ವಿವಿಧ ರೀತಿಯ ಪ್ರತಿಕ್ರಿಯೆಗಳನ್ನು ವ್ಯಕ್ತಪಡಿಸುತ್ತಿದ್ದಾರೆ.

ಆದರೆ, ಈ ವಿಡಿಯೋವನ್ನು ನಿಖರವಾಗಿ ಯಾವ ಸಂದರ್ಭದಲ್ಲಿ ಚಿತ್ರೀಕರಿಸಲಾಗಿದೆ ಹಾಗೂ ಕಾಂಬ್ಳಿ ಅವರು ಈ ಕೇರ್ ಸೆಂಟರ್‌ನಲ್ಲಿ ಇರುವುದಕ್ಕೆ ಕಾರಣವೇನು ಎಂಬ ಬಗ್ಗೆ ಹೆಚ್ಚಿನ ವಿವರಗಳು ಸದ್ಯಕ್ಕೆ ಲಭ್ಯವಾಗಿಲ್ಲ.

https://www.instagram.com/reel/DdtkuTDO9FC

Must Read