ಹೊಸದಿಗಂತ ವರದಿ,ಕಲಬುರಗಿ:
ಕೊತ್ತಲ ಸ್ವರ್ಣ ಜಯಂತಿ,೭ನೇ ಭಾರತೀಯ ಸಂಸ್ಕೃತಿ ಉತ್ಸವದ ಅಂಗವಾಗಿ ಶುಕ್ರವಾರ ಸಂಜೆ ಮೂಡುಬಿದಿರೆಯ ಆಳ್ವಾಸ್ ಶಿಕ್ಷಣ ಸಂಸ್ಥೆಯ ವತಿಯಿಂದ, ಆಳ್ವಾಸ್ ಸಂಸ್ಥೆಯ ೩೦೦ಕ್ಕೂ ಅಧಿಕ ವಿದ್ಯಾರ್ಥಿ ಕಲಾವಿದರಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು.
ಶೋ ಶಂಭೋ, ಲಂಬಾಣಿ ನೃತ್ಯ ಸೇರಿದಂತೆ ಹತ್ತು ಹಲವು ಸಾಂಸ್ಕೃತಿಕ ಕಲಾ ಪ್ರದರ್ಶನಗಳು ಸತತವಾಗಿ ಎರಡು ಗಂಟೆಗಳ ಕಾಲ ವಿಧ್ಯಾರ್ಥಿ ಕಲಾವಿದರು ಸಾರ್ವಜನಿಕರಿಗೆ ರಸದೌತಣ ನೀಡಿದರು..
ಈ ಸಂದರ್ಭದಲ್ಲಿ ಆಳ್ವಾಸ್ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಡಾ.ಮೋಹನ್ ಆಳ್ವ, ಭಾರತ ವಿಕಾಸ ಸಂಗಮದ ರಾಷ್ಟ್ರೀಯ ಸಂಚಾಲಕರಾದ ಕೆ.ಎನ. ಗೋವಿಂದಾಚಾರ್ಯ,
ಉತ್ಸವದ ಪ್ರಧಾನ ಸಂಯೋಜಕ ಬಸವರಾಜ ಪಾಟೀಲ್ ಸೇಡಂ, ಕೊತ್ತಲ ಬಸವೇಶ್ವರ ಶಿಕ್ಷಣ ಸಂಸ್ಥೆಯ ಶ್ರೀ ಸದಾಶಿವ ಸ್ವಾಮೀಜಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.