SHOCKING | ಭಾರತೀಯ ನೌಕಾಪಡೆಯ ಹೆಲಿಕಾಪ್ಟರ್ ಪತನ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಭಾರತೀಯ ನೌಕಾಪಡೆಯ ಹೆಲಿಕಾಪ್ಟರ್ ಮುಂಬೈನ ಕರಾವಳಿ ತೀರದಲ್ಲಿ ಪತನವಾಗಿದೆ.
ಹೆಲಿಕಾಪ್ಟರ್ ಅಪಘಾತಕ್ಕೀಡಾಗಿದ್ದು, ಸಿಬ್ಬಂದಿಯನ್ನು ರಕ್ಷಿಸಲಾಗಿದೆ ಎಂದು ನೌಕಾಪಡೆ ಮಾಹಿತಿ ನೀಡಿದೆ.

ಸುಧಾರಿತ ಲಘು ಹೆಲಿಕಾಪ್ಟರ್ ಇದಾಗಿದ್ದು, ದಿನನಿತ್ಯದ ವಿಹಾರದಲ್ಲಿದ್ದಾಗ ಅಪಘಾತ ಸಂಭವಿಸಿದೆ. ಹೆಲಿಕಾಪ್ಟರ್‌ನಲ್ಲಿ ಮೂವರು ಸಿಬ್ಬಂದಿಗಳಿದ್ದು, ಮೂವರನ್ನೂ ರಕ್ಷಿಸಲಾಗಿದೆ ಎಂದು ಭಾರತೀಯ ನೌಕಾಪಡೆ ತಿಳಿಸಿದೆ.

ಮುಂಬೈನ ಕರಾವಳಿ ತೀರಕ್ಕೆ ಬರುತ್ತಿದ್ದಂತೆಯೇ ಹೆಲಿಕಾಪ್ಟರ್‌ನಲ್ಲಿ ತಾಂತ್ರಿಕ ದೋಷ ಕಾಣಿಸಿದ್ದು, ತಕ್ಷಣವೇ ಅಪಘಾತಕ್ಕೀಡಾಗಿದೆ. ತಕ್ಷಣ ಪಾರುಗಾಣಿಕಾ ನೌಕಾ ಗಸ್ತು ಕ್ರಾಫ್ಟ್ ಮೂಲಕ ಮೂವರು ಸಿಬ್ಬಂದಿಯನ್ನು ರಕ್ಷಣೆ ಮಾಡಲಾಗಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

 

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!