ಕಡಲ್ಗಳ್ಳರ ಹೆಡೆಮುರಿಕಟ್ಟಿದ ಭಾರತೀಯ ನೌಕಾಪಡೆ: ಮಿಲಿಯನ್ ದಾಟಿದ ವಿಡಿಯೋ ವೀಕ್ಷಣೆ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಸರಕು ಸಾಗಣೆ ಹಡಗನ್ನು ಅಪಹರಿಸಿ ಅದರಲ್ಲಿದ್ದ 17 ಸಿಬ್ಬಂದಿಗಳನ್ನು ಒತ್ತೆಯಾಳಾಗಿರಿಸಿಕೊಂಡಿದ್ದ ಸೊಮಾಲಿಯಾ ಕಡಲ್ಗಳ್ಳರ ವಿರುದ್ಧ ಸತತ 40 ಗಂಟೆಗಳ ಕಾರ್ಯಾಚರಣೆ ನಡೆಸಿರುವ ಭಾರತೀಯ ನೌಕಾ ಪಡೆ 35 ಮಂದಿ ಕಡಲ್ಗಳ್ಳರನ್ನು ಹೆಡೆಮುರಿಕಟ್ಟಿ ಭಾರತಕ್ಕೆ ಕರೆತಂದಿದ್ದು, ಇದಕ್ಕೆ ಸಂಬಂಧಿಸಿದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ಸದ್ದು ಮಾಡುತ್ತಿದೆ.

ಖುದ್ದು ಸೇನೆಯ ವಕ್ತಾರರು ಕಾರ್ಯಾಚರಣೆಗೆ ಸಂಬಂಧಿಸಿದ ವಿಡಿಯೋಗಳನ್ನು ಹಂಚಿಕೊಂಡಿದ್ದು, ಎಕ್ಸ್ ಖಾತೆಯಲ್ಲಿ ಮಿಲಿಯನ್‌ಗೂ ಅಧಿಕ ವೀಕ್ಷಣೆಯಾಗಿದೆ. ವಿಡಿಯೋದಲ್ಲಿ ಕಡಲ್ಗಳ್ಳರು ಸೇನಾ ಸಿಬ್ಬಂದಿಯತ್ತ ಗುಂಡು ಹಾರಿಸುತ್ತಿರುವ ದೃಶ್ಯಗಳೂ ಸೆರೆಯಾಗಿದೆ.

ಭಾರತದ ಕರಾವಳಿ ಪ್ರದೇಶದಲ್ಲಿ ಕಡಲ್ಗಳ್ಳರು ಹಡಗು ಅಪಹರಣದ ದುಸ್ಸಾಹಸಕ್ಕೆ ಮುಂದಾಗಿದ್ದರು. ಈ ಬಗ್ಗೆ ಮಾಹಿತಿ ತಿಳಿಯುತ್ತಲೇ ದೌಡಾಯಿಸಿದ ಸೇನೆ ಎಲ್ಲಾ ಕಡಲ್ಗಳ್ಳರು ಶರಣಾಗುವಂತೆ ಮಾಡಿದ್ದು, 17 ಮಂದಿ ಸಿಬ್ಬಂದಿಗಳನ್ನೂ ರಕ್ಷಣೆ ಮಾಡಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!