ಐಎನ್‌ಎಸ್ ವಿಕ್ರಮಾದಿತ್ಯ ಯುದ್ಧನೌಕೆಯಲ್ಲಿ ಅಗ್ನಿ ಅವಘಡ

ಹೊಸದಿಗಂತ ಡಿಜಿಟಲ್‌ ಡೆಸ್ಕ್
ವಿಮಾನವಾಹಕ ನೌಕೆ ಐಎನ್‌ಎಸ್ ವಿಕ್ರಮಾದಿತ್ಯ ಬುಧವಾರ ಕಾರವಾರ ನೌಕಾನೆಲೆಯಲ್ಲಿ ಕಾರ್ಯಾಚರಣೆ ನಡೆಸುತ್ತಿದ್ದಾಗ ಸಣ್ಣ ಪ್ರಮಾಣದಲ್ಲಿ ಬೆಂಕಿ ಅವಘಡ ಸಂಭವಿಸಿದೆ ಎಂದು ಭಾರತೀಯ ನೌಕಾಪಡೆ ಮಾಹಿತಿ ನೀಡಿದೆ.
“ಕಾರವಾರದ ಸಮುದ್ರ ತೀರದಲ್ಲಿ ನೌಕಾ ಪ್ರಯೋಗಗಳನ್ನು ನಡೆಸುವ ಕಾರ್ಯಾಚರಣೆಯ ಸಂದರ್ಭದಲ್ಲಿ, INS ವಿಕ್ರಮಾದಿತ್ಯ ಹಡಗಿನಲ್ಲಿ ಬೆಂಕಿಯ ಕಾಣಿಸಿಕೊಂಡಿದೆ. ಹಡಗಿನ ಸಿಬ್ಬಂದಿ ಆನ್‌ಬೋರ್ಡ್ ಸಿಸ್ಟಮ್‌ಗಳನ್ನು ಬಳಸಿಕೊಂಡು ಬೆಂಕಿಯನ್ನು ನಿಯಂತ್ರಣಕ್ಕೆ ತಂದಿದ್ದಾರೆ. ಯಾವುದೇ ಸಾವುನೋವುಗಳು ವರದಿಯಾಗಿಲ್ಲ” ಎಂದು ನೌಕಾಪಡೆಯ ವಕ್ತಾರರು ಮಾಹಿತಿ ನೀಡಿದ್ದಾರೆ.
ಘಟನೆಯ ಬಗ್ಗೆ ತನಿಖೆ ನಡೆಸಲು ತನಿಖಾ ಮಂಡಳಿಗೆ ಆದೇಶಿಸಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!