Wednesday, February 28, 2024

ಬಿಬಿಸಿ ನೂತನ ಅಧ್ಯಕ್ಷರಾಗಿ ಭಾರತೀಯ ಮೂಲದ ಸಮೀರ್ ಶಾ ಆಯ್ಕೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್:

ಬಿಬಿಸಿ ನೂತನ ಅಧ್ಯಕ್ಷರಾಗಿ ಭಾರತೀಯ ಮೂಲದ ಡಾ. ಸಮೀರ್ ಶಾ ಅವರನ್ನು ಆಯ್ಕೆ ಮಾಡಲಾಗಿದೆ.

ಮಹಾರಾಷ್ಟ್ರದ ಔರಂಗಾಬಾದ್‌ನಲ್ಲಿ ಜನಿಸಿದ ಷಾ ಅವರು ಕಳೆದ 40 ವರ್ಷಗಳಿಂದ ಇಂಗ್ಲೆಂಡ್ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದು, ಶಾ ಅವರನ್ನು ಖ್ಯಾತ ವಾಹಿನಿ ಮಾಧ್ಯಮವಾದ ಬ್ರಿಟಿಷ್‌ ಬ್ರಾಡ್‌ಕಾಸ್ಟಿಂಗ್‌ ಕಾರ್ಪೋರೇಶನ್‌ (ಬಿಬಿಸಿ) ಮೀಡಿಯಾದ ಹೊಸ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಗಿದೆ.

ಟಿವಿ ನಿರ್ಮಾಣ ಮತ್ತು ಪತ್ರಿಕೋದ್ಯಮದಲ್ಲಿ 40 ವರ್ಷಗಳಿಗಿಂತ ಹೆಚ್ಚು ವೃತ್ತಿಜೀವನವನ್ನು ಕಂಡಿರುವ ಶಾ ಅವರು ಬಿಬಿಸಿ ಅಧ್ಯಕ್ಷ ಸ್ಥಾನಕ್ಕೆ ಸೂಕ್ತವಾದ ಮತ್ತು ಸಾಕಷ್ಟು ಅನುಭವವನ್ನು ಹೊಂದಿದ್ದಾರೆ ಎಂದು ಯುಕೆ ಸಂಸ್ಕೃತಿ ಕಾರ್ಯದರ್ಶಿ ಲೂಸಿ ಫ್ರೇಜರ್ ಬುಧವಾರ ಹೇಳಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!