ಶಾಕಿಂಗ್ ವೀಡಿಯೋ| ಬ್ಯಾಡ್ಮಿಂಟನ್ ಆಡುತ್ತಲೇ ಹೃದಯಾಘಾತದಿಂದ ಯುವಕ ಸಾವು

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಇತ್ತೀಚಿನ ದಿನಗಳಲ್ಲಿ ಹಠಾತ್ ಹೃದಯ ಸ್ತಂಭನದಿಂದ ಸಾಯುವವರ ಸಂಖ್ಯೆ ಹೆಚ್ಚಾಗಿದೆ. ಕಿರಿಯರು, ಹಿರಿಯರು ಎಂಬ ವಯಸ್ಸಿನ ಭೇದವಿಲ್ಲದೆ ಇದ್ದಕ್ಕಿದ್ದಂತೆ ಹೃದಯಾಘಾತದಿಂದ ಸಾಯುತ್ತಿದ್ದಾರೆ.

ಮಸ್ಕತ್ ನಲ್ಲಿ ಭಾರತೀಯ ಮೂಲದ ವ್ಯಕ್ತಿಯೊಬ್ಬರು ಅನಿರೀಕ್ಷಿತವಾಗಿ ಸಾವನ್ನಪ್ಪಿದ್ದಾರೆ. ಬ್ಯಾಡ್ಮಿಂಟನ್ ಆಡುವಾಗ ಅಂಗಳದಲ್ಲೇ ಕುಸಿದು ಬಿದ್ದಿದ್ದಾರೆ. ಆಸ್ಪತ್ರೆಗೆ ಕರೆದೊಯ್ದಾಗ ಹೃದಯಾಘಾತದಿಂದ ವ್ಯಕ್ತಿ ಮೃತಪಟ್ಟಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ. ಮೃತರ ಊರು ಕೇರಳ ಎಂದು ತಿಳಿದುಬಂದಿದೆ. ಖುಷಿ ಖುಷಿಯಿಂದ ಸ್ನೇಹಿತರೊಂದಿಗೆ ಆಟವಾಡುತ್ತಿದ್ದ ವ್ಯಕ್ತಿ ಇದ್ದಕ್ಕಿದ್ದಂತೆ ಕುಸಿದು ಬಿದ್ದಿರುವುದು ಆತಂಕಕಾರಿಯಾಗಿದೆ.

ಬ್ಯಾಡ್ಮಿಂಟನ್ ಆಡುತ್ತಿದ್ದ ವೇಳೆ ಅಂಗಣದಲ್ಲಿ ಕುಸಿದು ಬೀಳುತ್ತಿರುವ ದೃಶ್ಯಗಳು ಸಿಸಿ ಕ್ಯಾಮರಾದಲ್ಲಿ ದಾಖಲಾಗಿವೆ. ಇದೀಗ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!