ಹೊಸದಿಗಂತ ಡಿಜಿಟಲ್ ಡೆಸ್ಕ್:
ಅಮೆರಿಕದಲ್ಲಿ ಶೂಟೌಟ್ ಪ್ರಕರಣಗಳು ಮುಂದುವರೆದಿದ್ದು, ಫಿಲಡೆಲ್ಫಿಯಾದಲ್ಲಿ ದರೋಡೆಕೋರರು ನಡೆಸಿದ ಗುಂಡಿನ ದಾಳಿಯಲ್ಲಿ ಭಾರತೀಯ ಮೂಲದ ವಿದ್ಯಾರ್ಥಿ ಮೃತಪಟ್ಟಿದ್ದಾನೆ.
ಮೃತ ವಿದ್ಯಾರ್ಥಿಯನ್ನು ಜೂಡ್ ಚಾಕೋ (21) ಎಂದು ಗುರುತಿಸಲಾಗಿದೆ.
ದರೋಡೆಕೋರರು ವಿದ್ಯಾರ್ಥಿ ಜುಡೆ ಚಾಕೋರನ್ನು ಅಡ್ಡಗಟ್ಟಿ ಹಲ್ಲೆ ನಡೆಸಿ ದರೋಡೆಗೆ ಯತ್ನಿಸಿದ್ದರು. ಇದಕ್ಕೆ ವಿದ್ಯಾರ್ಥಿ ಜುಡೆ ಚಾಕೋ ಪ್ರತಿರೋಧ ವ್ಯಕ್ತಪಡಿಸಿದ್ದಕ್ಕೆ ಇಬ್ಬರು ದರೋಡೆಕೋರರು ಗುಂಡಿನ ದಾಳಿ ಮಾಡಿದ್ದಾರೆ. ಪರಿಣಾಮ ವಿದ್ಯಾರ್ಥಿ ಜುಡೆ ಚಾಕೋ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.
ಜೂಡ್ ಚಾಕೊ ಒಬ್ಬ ವಿದ್ಯಾರ್ಥಿಯಾಗಿದ್ದು, ಜೊತೆಗೆ ಅರೆಕಾಲಿಕ ಕೆಲಸ ಮಾಡುತ್ತಿದ್ದ. ದರೋಡೆ ಯತ್ನದ ವೇಳೆ ಇಬ್ಬರು ವ್ಯಕ್ತಿಗಳು ಆತನ ಮೇಲೆ ಹಲ್ಲೆ ನಡೆಸಿದ್ದಾರೆ.
ಮೃತ ವಿದ್ಯಾರ್ಥಿಯ ಪೋಷಕರು ಕೇರಳದ ಕೊಲ್ಲಂ ಜಿಲ್ಲೆ ನಿವಾಸಿಗಳು ಎಂದು ತಿಳಿದುಬಂದಿದ್ದು, 30 ವರ್ಷಗಳ ಹಿಂದೆ ಕೇರಳದಿಂದ ಅಮೆರಿಕಕ್ಕೆ ಬಂದು ನೆಲೆಸಿದ್ದರು ಎಂದು ವರದಿಯಾಗಿದೆ.