ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………………………………………
ಹೊಸದಿಗಂತ ಆನ್ಲೈನ್ ಡೆಸ್ಕ್:
ಅಫ್ಘಾನಿಸ್ತಾನದ ಕಂದಹಾರ್ನಲ್ಲಿ ನಡೆಯುತ್ತಿರುವ ಘರ್ಷಣೆಯಲ್ಲಿ ಭಾರತೀಯ ಛಾಯಾಗ್ರಾಹಕ ದಾನಿಷ್ ಸಿದ್ದಿಕಿ ಹತ್ಯೆಯಾಗಿದೆ.
ಪುಲಿಟ್ಜರ್ ಪ್ರಶಸ್ತಿ ವಿಜೇತ ಫೋಟೊ ಜರ್ನಲಿಸ್ಟ್ ದಾನಿಷ್ ಸಿದ್ದಿಕಿ ರಾಯ್ಟರ್ಸ್ ಸುದ್ದಿ ಸಂಸ್ಥೆಗೆ ಕೆಲಸ ಮಾಡುತ್ತಿದ್ದರು. ಕೆಲವು ದಿನಗಳಿಂದ ಕಂದಹಾರ್ನಲ್ಲಿ ನಡೆಯುತ್ತಿರುವ ಗಲಭೆ ಫೋಟೊಗಳನ್ನು ತೆಗೆದು ಕಳುಹಿಸುತ್ತಿದ್ದರು.
ತಾಲಿಬಾನ್ ಮತ್ತು ಸರ್ಕಾರಿ ಪಡೆಗಳ ನಡುವಿನ ಘರ್ಷಣೆಯಲ್ಲಿ ದಾನಿಷ್ ಹತ್ಯೆಯಾಗಿದೆ ಎನ್ನಲಾಗಿದೆ. ಈ ಹಿಂದೆ ಬಹಳಷ್ಟು ಬಾರಿ ದಾನಿಷ್ ಮೇಲೆ ದಾಳಿಯಾಗಿದ್ದು, ಈ ಬಗ್ಗೆ ದಾನಿಷ್ ಟ್ವೀಟ್ ಮಾಡಿದ್ದರು.