ಬೆಂಗಳೂರು-ತುಮಕೂರು ರೈಲು ಮಾರ್ಗದಲ್ಲಿ ವಿದ್ಯುತ್ ವ್ಯವಸ್ಥೆ ಉನ್ನತೀಕರಣ: ಗ್ರೀನ್ ಸಿಗ್ನಲ್ ನೀಡಿದ ಭಾರತೀಯ ರೈಲ್ವೆ

ಹೊಸದಿಗಂತ ಡಿಜಿಟಲ್ ಡೆಸ್ಕ್: ರಾಜ್ಯದ ಅತ್ಯಂತ ಜನನಿಬಿಡ ರೈಲ್ವೆ ಕಾರಿಡಾರ್‌ಗಳಲ್ಲಿ ಒಂದಾದ ಬೆಂಗಳೂರು-ತುಮಕೂರು ರೈಲು ಮಾರ್ಗದಲ್ಲಿ ರೈಲುಗಳ ಸಾಮರ್ಥ್ಯ ಮತ್ತು ಕಾರ್ಯಾಚರಣೆಯ ದಕ್ಷತೆಯನ್ನು ಹೆಚ್ಚಿಸುವ ಉದ್ದೇಶದಿಂದ ವಿದ್ಯುತ್ ಎಳೆತ (ಟ್ರಾಕ್ಷನ್) ವ್ಯವಸ್ಥೆಯನ್ನು ಉನ್ನತೀಕರಿಸಲು ಭಾರತೀಯ ರೈಲ್ವೆ ಅನುಮೋದನೆ ನೀಡಿದೆ. ನೈಋತ್ಯ ರೈಲ್ವೆಯ ವ್ಯಾಪ್ತಿಯಲ್ಲಿರುವ ಈ ಯೋಜನೆಯಡಿ, ಪ್ರಸ್ತುತ ಇರುವ ಎಲೆಕ್ಟ್ರಿಕ್ ಟ್ರಾಕ್ಷನ್ ವ್ಯವಸ್ಥೆಯನ್ನು 120 ಟ್ರ್ಯಾಕ್ ಕಿಲೋಮೀಟರ್ ವ್ಯಾಪ್ತಿಯಲ್ಲಿ ಮೇಲ್ದರ್ಜೆಗೇರಿಸಲಾಗುತ್ತದೆ. ಈ ಕಾಮಗಾರಿಗೆ ಒಟ್ಟು ₹162.57 ಕೋಟಿ ಮಂಜೂರಾಗಿದೆ. ಬೆಂಗಳೂರು-ತುಮಕೂರು ವಿಭಾಗವು ಆಯಕಟ್ಟಿನ ದೃಷ್ಟಿಯಿಂದ ಅತ್ಯಂತ ಮಹತ್ವದ್ದಾಗಿದ್ದು, … Continue reading ಬೆಂಗಳೂರು-ತುಮಕೂರು ರೈಲು ಮಾರ್ಗದಲ್ಲಿ ವಿದ್ಯುತ್ ವ್ಯವಸ್ಥೆ ಉನ್ನತೀಕರಣ: ಗ್ರೀನ್ ಸಿಗ್ನಲ್ ನೀಡಿದ ಭಾರತೀಯ ರೈಲ್ವೆ