‘ಆಸ್ಟ್ರೇಲಿಯನ್ ಓಪನ್ 2024’ ಟೈಟಲ್ ಗೆದ್ದು, ಇತಿಹಾಸ ನಿರ್ಮಿಸಿದ ಭಾರತದ ‘ರೋಹನ್ ಬೋಪಣ್ಣ’

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ಭಾರತದ ಲೆಜೆಂಡರಿ ಟೆನಿಸ್ ತಾರೆ ರೋಹನ್ ಬೋಪಣ್ಣ ಅವರ ಕನಸು ಕೊನೆಗೂ ನನಸಾಗಿದೆ. ಕನ್ನಡಿಗ ರೋಹನ್ ಬೋಪಣ್ಣ ಹಾಗೂ ಅವರ ಸಹ ಆಟಗಾರ ಮ್ಯಾಥ್ಯೂ ಎಬ್ಡೆನ್ ಆಸ್ಟ್ರೇಲಿಯನ್ ಓಪನ್‌ನಲ್ಲಿ ಪುರುಷರ ಡಬಲ್ಸ್ ಪ್ರಶಸ್ತಿಯನ್ನು ಗೆದ್ದು ಇತಿಹಾಸ ಸೃಷ್ಟಿಸಿದ್ದಾರೆ.

ಶನಿವಾರ ಮೆಲ್ಬೋರ್ನ್ ಪಾರ್ಕ್‌ನಲ್ಲಿ ನಡೆದ ಫೈನಲ್‌ ಪಂದ್ಯದಲ್ಲಿ ರೋಹನ್ ಬೋಪಣ್ಣ ಹಾಗೂ ಆಸ್ಟ್ರೇಲಿಯಾದ ಮ್ಯಾಥ್ಯೂ ಎಬ್ಡೆನ್ ಜೋಡಿ, ಇಟಲಿಯ ಸಿಮೋನ್ ಬೊಲೆಲ್ಲಿ ಮತ್ತು ಆಂಡ್ರೆ ವವಾಸ್ಸೋರಿ ಜೋಡಿಯನ್ನು 7-5, 7-5 ಸೆಟ್‌ಗಳಿಂದ ಸೋಲಿಸಿ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿತು.
ಇದರೊಂದಿಗೆ ಬೋಪಣ್ಣ ತಮ್ಮ ವೃತ್ತಿಜೀವನದಲ್ಲಿ ಮೊದಲ ಬಾರಿಗೆ ಪುರುಷರ ಡಬಲ್ಸ್ ಗ್ರ್ಯಾಂಡ್ ಸ್ಲಾಮ್‌ ಪ್ರಶಸ್ತಿಯನ್ನು ಗೆದ್ದು ಇತಿಹಾಸ ಸೃಷ್ಟಿಸಿದರು. ಅಷ್ಟೇ ಅಲ್ಲದೆ 43ನೇ ವಯಸ್ಸಿನಲ್ಲಿ ಈ ಪ್ರಶಸ್ತಿ ಗೆದ್ದು, ಗ್ರ್ಯಾಂಡ್ ಸ್ಲಾಮ್‌ನಲ್ಲಿ ಯಾವುದೇ ಪುರುಷರ ಈವೆಂಟ್ ಪ್ರಶಸ್ತಿಯನ್ನು ಗೆದ್ದ ಅತ್ಯಂತ ಹಿರಿಯ ಆಟಗಾರ ಎಂಬ ಹೆಗ್ಗಳಿಕೆಗೂ ಬೋಪಣ್ಣ ಪಾತ್ರರಾದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!