ಕೆನಡಾದಲ್ಲಿ ಗುಂಡಿಕ್ಕಿ ಭಾರತೀಯ ವಿದ್ಯಾರ್ಥಿಯ ಹತ್ಯೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌
ಕೆನಡಾದ ಟೊರೊಂಟೊ ನಗರದ ಸುರಂಗಮಾರ್ಗ ನಿಲ್ದಾಣದ ಪ್ರವೇಶದ್ವಾರದಲ್ಲಿ ಅಪರಿಚಿತ ವ್ಯಕ್ತಿಯೊಬ್ಬ ಭಾರತೀಯ ವಿದ್ಯಾರ್ಥಿಯನ್ನು ಗುಂಡಿಕ್ಕಿ ಕೊಂದಿರುವ ಭೀಕರ ಘಟನೆ ನಡೆದಿದೆ.
ಉತ್ತರಪ್ರದೇಶದ ಗಾಜಿಯಾಬಾದ್‌ ಮೂಲದ ಕಾರ್ತಿಕ್‌ ವಾಸುದೇವ್(‌21), ಮೃತ ವಿದ್ಯಾರ್ಥಿ  ಎಂದು ತಿಳಿದುಬಂದಿದೆ. ಕೂಡಲೇ ಅವರನ್ನು ಹತ್ತಿರದ ಆಸ್ಪತ್ರೆಗೆ ದಾಖಲು ಮಾಡಿಲಾಗಿತ್ತು, ಅಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಘಟನೆ ಸಂಬಂದ ಟೊರೆಂಟೊ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
ವಾಸುದೇವ್‌ ಭಾರತದಿಂದ ಕೆನಡಾಗೆ ಜನವರಿಯಲ್ಲಿ ತಮ್ಮ ವಿದ್ಯಾಭ್ಯಾಸಕ್ಕೆಂದು ಬಂದಿದ್ದರು, ಇಲ್ಲಿನ ಸೆನೆಕಾ ಕಾಲೇಜಿನಲ್ಲಿ ಮಾರ್ಕೆಟಿಂಗ್‌ ಮ್ಯಾನೇಜ್‌ಮೆಂಟ್‌ ವಿದ್ಯಾರ್ಥಿಯಾಗಿದ್ದರು ಎಂಬ ಮಾಹಿತಿ ಲಭ್ಯವಾಗಿದೆ. ವಿದ್ಯಾರ್ಥಿ ಸಾವಿಗೆ ರಾಯಭಾರಿ ಕಚೇರಿ ಹಾಗೂ ಕಾಲೇಜು ಆಡಳಿತ ಮಂಡಳಿ ಸಂತಾಪ ಸೂಚಿಸಿದೆ.
“ಕಾರ್ತಿಕ್ ವಾಸುದೇವ್ ಅವರ ಹತ್ಯೆಯಿಂದ ನಾವು ಆಘಾತಕ್ಕೊಳಗಾಗಿದ್ದೇವೆ ಮತ್ತು ದುಃಖಿತರಾಗಿದ್ದೇವೆ” ಎಂದು ಭಾರತೀಯ ರಾಯಭಾರ ಕಚೇರಿ ಟ್ವಿಟರ್‌ನಲ್ಲಿ ಪೋಸ್ಟ್ ಮಾಡಿದೆ. ನಾವು ಕುಟುಂಬದೊಂದಿಗೆ ಸಂಪರ್ಕದಲ್ಲಿದ್ದೇವೆ ಮತ್ತು ಪಾರ್ಥಿವ ಶರೀರ ರವಾನೆ ಮಾಡಲು ಸಾಧ್ಯವಿರುವ ಎಲ್ಲಾ ಕ್ರಮಗಳನ್ನು ಕೈಗೊಂಡಿರುವುದಾಗಿ ತಿಳಿಸಿದೆ. ವಾಸುದೇವ್‌ ಹತ್ಯೆಗೆ ವಿದೇಶಾಂಗ ಸಚಿವ ಜೈ ಶಂಕರ್‌ ಸಹ ಸಂತಾಪ ವ್ಯಕ್ತಪಡಿಸಿದ್ದಾರೆ. “ಈ ದುರಂತ ಘಟನೆಯಿಂದ ದುಃಖವಾಗಿದೆ. ಕುಟುಂಬಕ್ಕೆ ದೇವರು ದುಃಖ ಭರಿಸುವ ಶಕ್ತಿ ನೀಡಲಿ”ಎಂದು ಜೈಶಂಕರ್ ಟ್ವೀಟ್ ಮಾಡಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!