Thursday, March 23, 2023

Latest Posts

ಕೀವ್‌ನಿಂದ ಬರುತ್ತಿದ್ದ ಭಾರತದ ವಿದ್ಯಾರ್ಥಿಗೆ ಗುಂಡೇಟು: ಆಸ್ಪತ್ರೆಗೆ ದಾಖಲು

ಹೊಸದಿಗಂತ ಡಿಜಿಟಲ್ ಡೆಸ್ಕ್:

ರಷ್ಯಾ ಮತ್ತು ಉಕ್ರೇನ್ ಯುದ್ಧ ಒಂಬತ್ತನೇ ದಿನಕ್ಕೆ ಕಾಲಿಟ್ಟಿದ್ದು, ಯುದ್ಧದಿಂದ ಮತ್ತೋರ್ವ ಭಾರತೀಯ ವಿದ್ಯಾರ್ಥಿಗೆ ಗುಂಡು ತಗುಲಿದೆ.

ರಷ್ಯಾ ದಾಳಿಗೆ ರಾಜ್ಯದ ವಿದ್ಯಾರ್ಥಿ ಮೃತಪಟ್ಟ ಬೆನ್ನಲ್ಲೇ ಇದೀಗ ಮತ್ತೋರ್ವ ವಿದ್ಯಾರ್ಥಿಗೆ ಗುಂಡು ತಗುಲಿದೆ. ಸದ್ಯ ಅವರನ್ನು ಆಸ್ಪತ್ರೆಗೆ ಸೇರಿಸಲಾಗಿದೆ . ಈ ಬಗ್ಗೆ ರಸ್ತೆ ಸಾರಿಗೆ ಮತ್ತು ಹೆದ್ದಾರಿಗಳ ರಾಜ್ಯ ಸಚಿವ ಜನರಲ್ ವಿಕೆ ಸಿಂಗ್ ಮಾಹಿತಿ ನೀಡಿದ್ದಾರೆ.

ಕೀವ್‌ನಿಂದ ಬರುತ್ತಿದ್ದ ವಿದ್ಯಾರ್ಥಿಯೊಬ್ಬನಿಗೆ ಗುಂಡು ತಗುಲಿದೆ. ಆತ ಮಾರ್ಗ ಮಧ್ಯೆ ವಾಪಾಸಾಗಿದ್ದಾರೆ ಎಂದು ಹೇಳಿದ್ದಾರೆ. ಎಲ್ಲ ವಿದ್ಯಾರ್ಥಿಗಳನ್ನು ಭಾರತಕ್ಕೆ ಸುರಕ್ಷಿತವಾಗಿ ಕರೆತರುವ ಪ್ರಯತ್ನ ಜಾರಿಯಲ್ಲಿದೆ ಎಂದಿದ್ದಾರೆ.

 

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!