ಚಾಂಪಿಯನ್ಸ್ ಟ್ರೋಫಿ ಆಡಲು ಪಾಕ್ ಗೆ ಭಾರತ ತಂಡ?: ಜಯ್​ ಶಾ ಹೇಳಿದ್ದೇನು?

ಹೊಸದಿಗಂತ ಡಿಜಿಟಲ್ ಡೆಸ್ಕ್:

ಪಾಕಿಸ್ತಾನದ ಆತಿಥ್ಯದಲ್ಲಿ ಮುಂದಿನ ವರ್ಷ ನಡೆಯುವ ಐಸಿಸಿ ಚಾಂಪಿಯನ್ಸ್ ಟ್ರೋಫಿಯಲ್ಲಿ ಭಾರತ ತಂಡ ಪಾಲ್ಗೊಳ್ಳಲಿದೆಯಾ? ಇಲ್ಲವಾ? ಎಂಬ ಬಗ್ಗೆ ಚರ್ಚೆ ನಡೆಯುತ್ತಲೇ ಇದೆ. ಇದೇ ವಿಚಾರವಾಗಿ ಬಿಸಿಸಿಐ ಕಾರ್ಯದರ್ಶಿ ಜಯ್​ ಶಾ ಮೊದಲ ಬಾರಿಗೆ ಮೌನ ಮುರಿದಿದ್ದಾರೆ.

ಸಂದರ್ಶನವೊಂದರಲ್ಲಿ ಈ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಜಯ್​ ಶಾ, ಭಾರತ ತಂಡ ಪಾಕಿಸ್ತಾನಕ್ಕೆ ತೆರಳುವ ಬಗ್ಗೆ ಇನ್ನೂ ನಿರ್ಧಾರ ಕೈಗೊಂಡಿಲ್ಲ. ಟೂರ್ನಿ ಆರಂಭಕ್ಕೆ ಕೆಲವು ದಿನ ಮೊದಲು ಈ ಬಗ್ಗೆ ನಿರ್ಧಾರ ಕೈಗೊಳ್ಳಲಾಗುವುದು ಎಂದಿದ್ದಾರೆ.

ಪಾಕಿಸ್ತಾನ ಮಾತ್ರ ಭಾರತ ತಂಡದ ಆಗಮನದ ನಿರೀಕ್ಷೆಯಲ್ಲಿದೆ. ಇದೇ ಕಾರಣಕ್ಕೆ ತಾತ್ಕಾಲಿಕ ವೇಳಾಪಟ್ಟಿಯನ್ನು ಕೂಡ ಪ್ರಕಟಿಸಿದೆ. ಈ ವೇಳಾಪಟ್ಟಿ ಪ್ರಕಾರ ಭಾರತ ಮತ್ತು ಪಾಕ್​ ನಡುವಣ ಪಂದ್ಯ ಮಾರ್ಚ್ 1 ರಂದು ಲಾಹೋರ್​ನಲ್ಲಿ ನಡೆಯಬೇಕಿದೆ.

ಭಾರತ ತಂಡ ಚಾಂಪಿಯನ್ಸ್ ಟ್ರೋಫಿ ಆಡಲು ಪಾಕಿಸ್ತಾನಕ್ಕೆ ತೆರಳದಿದ್ದರೆ ಆ ದೇಶದ ಕ್ರಿಕೆಟ್ ಮಂಡಳಿಗೆ ಭಾರಿ ನಷ್ಟವಾಗುವ ಸಾಧ್ಯತೆ ಇದೆ. ಈಗಾಗಲೇ ಪಾಕಿಸ್ತಾನ ನಷ್ಟದ ಹಾದಿಯಲ್ಲಿದೆ. ಕ್ರಿಕೆಟ್​ನಲ್ಲಿ ಟೀಮ್​ ಇಂಡಿಯಾಗೆ ಇರುವ ಕ್ರೇಜ್ ಮತ್ತು ಬೇಡಿಕೆ​ ಬೇರೆ ಯಾವ ದೇಶಕ್ಕೂ ಇಲ್ಲ. ಹೀಗಾಗಿ ಟೀಮ್​ ಇಂಡಿಯಾ ಪಾಕಿಸ್ತಾನಕ್ಕೆ ಹೋದಲ್ಲಿ ಅದರಿಂದ ಆರ್ಥಿಕವಾಗಿಯೂ ಲಾಭವಾಗಲಿದೆ ಮತ್ತು ಪಾಕ್​ ಮೇಲೆ ಇರುವ ಕಳಂಕವೂ ದೂರವಾಗಲಿದೆ. ಅಲ್ಲದೆ, ಉಭಯ ದೇಶಗಳ ನಡುವಿನ ಸಂಬಂಧವೂ ಕೂಡ ಮತ್ತೆ ಚಿಗುರಲಿದೆ ಎಂಬ ನಿರೀಕ್ಷೆಯಲ್ಲಿದೆ.

ಸದ್ಯ ಕೇಳಿ ಬಂದಿರುವ ಮಾಹಿತಿ ಪ್ರಕಾರ ಪಿಸಿಬಿಯ ಮನವಿಗೆ ಐಸಿಸಿ ಸ್ಪಂದಿಸಿದ್ದು, ಹೈಬ್ರಿಡ್​ ಮಾದರಿಯ ಪಂದ್ಯಗಳಿಗೆ ಐಸಿಸಿ ಅನುಮತಿಸಿಲ್ಲ ಎಂದು ವರದಿಯಾಗಿದೆ. ಈ ವಿಚಾವಾಗಿ ಈಗಾಗಲೇ ಬಿಸಿಸಿಐ ಜತೆ ಮಾತುಕತೆ ನಡೆಸುತ್ತಿದೆ ಎನ್ನಲಾಗಿದೆ. ಒಟ್ಟಾರೆ ಕೇಂದ್ರ ಸರ್ಕಾರ ತೆಗೆದುಕೊಳ್ಳುವ ನಿರ್ಧಾರದ ಮೇಲೆ ಭಾರತ ಚಾಂಪಿಯನ್ಸ್​ ಟ್ರೋಫಿ ಆಡುವ ಬಗ್ಗೆ ನಿರ್ಧಾರವಾಗಲಿದೆ.

- Advertisement - Skool Shine Skool Shine

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!