ಕೇಂದ್ರ ಸರ್ಕಾರ ಅನುಮತಿ ಕೊಟ್ಟರೆ ಭಾರತ ತಂಡ ಪಾಕ್ ಗೆ ಹೋಗುತ್ತೆ: BCCI

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:  

ಕೇಂದ್ರ ಸರ್ಕಾರ ಅನುಮತಿ ಕೊಟ್ಟರೆ, ಐಸಿಸಿ ಚಾಂಪಿಯನ್ಸ್ ಟ್ರೋಫಿ ಟೂರ್ನಿಗೆ ಭಾರತ ತಂಡವನ್ನು ಪಾಕಿಸ್ತಾನಕ್ಕೆ ಕಳುಹಿಸಲಾಗುವುದು ಎಂದು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (BCCI) ಉಪಾಧ್ಯಕ್ಷ ರಾಜೀವ್ ಶುಕ್ಲಾ (Rajeev Shukla) ಹೇಳಿದ್ದಾರೆ.

2025ರ ಏಪ್ರಿಲ್‌ 7ರಿಂದ ಮೇ 20ರ ವರೆಗೆ ಪಾಕ್‌ ಆತಿಥ್ಯದಲ್ಲಿ ಐಸಿಸಿ ಚಾಂಪಿಯನ್ಸ್ ಟ್ರೋಫಿ ನಡೆಯಲಿದ್ದು, ಪಾಕಿಸ್ತಾನದ (Pakistan) ಕರಾಚಿ, ಲಾಹೋರ್, ಮುಲ್ತಾನ್ ಮತ್ತು ರಾವಲ್ಪಿಂಡಿ ಕ್ರೀಡಾಂಗಣಗಳು ಆತಿಥ್ಯ ವಹಿಸಲಿವೆಆದ್ರೆ . ಪಾಕಿಸ್ತಾನಕ್ಕೆ ಟೀಂ ಇಂಡಿಯಾ ತೆರಳಲಿದೆಯೇ ಅನ್ನೋ ಬಗ್ಗೆ ಮಾತನಾಡಿದ ರಾಜೀವ್ ಶುಕ್ಲಾ, ಕೇಂದ್ರ ಸರ್ಕಾರ ನಮಗೆ ಏನು ಹೇಳುತ್ತದೆಯೋ ಅದನ್ನು ಮಾಡುತ್ತೇವೆ. ಅನುಮತಿ ನೀಡಿದರೆ ಭಾರತ ತಂಡವನ್ನು ಪಾಕಿಸ್ತಾನಕ್ಕೆ ಕಳುಹಿಸುತ್ತೇವೆ ಎಂದು ತಿಳಿಸಿದ್ದಾರೆ.

ಚಾಂಪಿಯನ್ಸ್‌ ಟ್ರೋಫಿಯ ಕರಡು ವೇಳಾಪಟ್ಟಿಯನ್ನು ಪಾಕಿಸ್ತಾನ ಕ್ರಿಕೆಟ್‌ ಮಂಡಳಿ ಈಗಾಗಲೇ ಅಂತಾರಾಷ್ಟ್ರೀಯ ಕ್ರಿಕೆಟ್‌ ಮಂಡಳಿಗೆ ಕಳುಹಿಸಿದೆ ಎಂದು ಪಿಸಿಬಿ ಮುಖ್ಯಸ್ಥ ಮೊಹ್ಸಿನ್ ನಖ್ವಿ ಹೇಳಿದ್ದಾರೆ.

2023ರ ಏಕದಿನ ಏಷ್ಯಾಕಪ್‌ ಟೂರ್ನಿಯನ್ನಾಡಲು ಭಾರತ ತಂಡವನ್ನು ಪಾಕ್‌ಗೆ ಕಳುಹಿಸಲು ಬಿಸಿಸಿಐ ನಿರಾಕರಿಸಿದ ನಂತರ ACC (ಏಷ್ಯನ್‌ ಕ್ರಿಕೆಟ್‌ ಸಮಿತಿ) ಹೈಬ್ರಿಡ್‌ ಮಾದರಿಯಲ್ಲಿ ಆಡಿಸಲು ನಿರ್ಧರಿಸಿತು. ಏಷ್ಯಾಕಪ್‌ ಟೂರ್ನಿಯ ಹಕ್ಕು ಪಾಕಿಸ್ತಾನದ ಬಳಿಯಿದ್ದರೂ ಪಾಕ್‌ನಲ್ಲಿ ಕೇವಲ 4 ಪಂದ್ಯಗಳನ್ನಾಡಲು ಮಾತ್ರವೇ ಅನುಮತಿ ನೀಡಿತು. ಉಳಿದ 9 ಪಂದ್ಯಗಳನ್ನ ಶ್ರೀಲಂಕಾದಲ್ಲಿ ಆಡಿಸಲು ನಿರ್ಧರಿಸಿತು. ಈ ಬಾರಿಯೂ ಅದೇ ರೀತಿ ಹೈಬ್ರಿಡ್‌ ಮಾದರಿಯಲ್ಲಿ ಪಂದ್ಯಗಳನ್ನು ಆಯೋಜಿಸಲಾಗುತ್ತದೆಯೇ ಎಂಬುದನ್ನು ಕಾದು ನೋಡಬೇಕಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!