Friday, December 8, 2023

Latest Posts

ಕೆನಡಾದಲ್ಲಿ ವೀಸಾ ಸೇವೆ ಸ್ಥಗಿತಗೊಳಿಸಿದ ಭಾರತ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಕೆನಡಾದಲ್ಲಿ ನಡೆದ ಖಲಿಸ್ತಾನಿ ಭಯೋತ್ಪಾದಕ ಹರ್ದೀಪ್ ಸಿಂಗ್ ನಿಜ್ಜಾರ್ ಹತ್ಯೆಯ ಹಿಂದೆ ಭಾರತದ ಕೈವಾಡವಿದೆ ಎಂಬ ಆರೋಪ ಕೇಳಿ ಬಂದ ಹಿನ್ನೆಲೆ ಉಭಯ ದೇಶಗಳ ನಡುವಿನ ರಾಜತಾಂತ್ರಿಕ ವಿವಾದದ ನಡುವೆ ಭಾರತವು ಮುಂದಿನ ಸೂಚನೆ ನೀಡುವವರೆಗೆ ಕೆನಡಾದ ಪ್ರಜೆಗಳಿಗೆ ವೀಸಾ ಸೇವೆಗಳನ್ನು ಸ್ಥಗಿತಗೊಳಿಸಿದೆ.

ವೀಸಾ ಸಲಹಾ ಸೇವೆಗಳನ್ನು ನೀಡುವ ಭಾರತದಲ್ಲಿನ ಆನ್‌ಲೈನ್ ವೀಸಾ ಅರ್ಜಿ ಕೇಂದ್ರವಾದ ಬಿಎಲ್‌ಎಸ್ ಇಂಟರ್‌ ನ್ಯಾಷನಲ್‌ ತನ್ನ ವೆಬ್‌ಸೈಟ್‌ನಲ್ಲಿ ಪೋಸ್ಟ್ ಮಾಡಿದ್ದು, “ಭಾರತೀಯ ಮಿಷನ್‌ನಿಂದ ಪ್ರಮುಖ ಸೂಚನೆ: ಕಾರ್ಯಾಚರಣೆಯ ಕಾರಣಗಳಿಂದಾಗಿ 21 ಸೆಪ್ಟೆಂಬರ್ 2023 ರಿಂದ ಜಾರಿಗೆ ಬರುವಂತೆ ಮುಂದಿನ ಸೂಚನೆ ತನಕ, ಭಾರತೀಯ ವೀಸಾ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ’ ಎಂದು ಹೇಳಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!