ದಕ್ಷಿಣ ಆಫ್ರಿಕಾ ವಿರುದ್ಧ ಗೆಲುವಿನ ಶುಭಾರಂಭ ಪಡೆದ ಭಾರತೀಯ ವನಿತೆಯರು!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಮಹಿಳೆಯರ ಟಿ20 ತ್ರಿಕೋನ ಸರಣಿಯ ಮೊದಲ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ಭಾರತ ತಂಡ 27 ರನ್​ಗಳ ಗೆಲುವು ಸಾಧಿಸಿದರು.

ಟಾಸ್​ ಸೋತು ಮೊದಲು ಬ್ಯಾಟಿಂಗ್​ ನಡೆಸಿದ ಭಾರತ ನಿಗದಿತ 20 ಓವರ್​ಗಳಲ್ಲಿ 6 ವಿಕೆಟ್​ನಷ್ಟಕ್ಕೆ 147 ರನ್​ ಗಳಿಸಿತು. ಬಳಿಕ ಗುರಿ ಬೆನ್ನಟ್ಟಿದ ದಕ್ಷಿಣ ಆಫ್ರಿಕಾ 9 ವಿಕೆಟ್​ಗೆ 120 ರನ್ ಗಳಿಸಿ​ ಶರಣಾಯಿತು.

ಮೊದಲು ಬ್ಯಾಟಿಂಗ್​ ನಡೆಸಿದ ಭಾರತ ಪರ ಅಮನ್ಜೋತ್ ಕೌರ್ ಅಜೇಯ 41, ಆರಂಭಿಕ ಆಟಗಾರ್ತಿ ಯಾಸ್ತಿಕಾ ಭಾಟಿಯಾ 35, ದೀಪ್ತಿ ಶರ್ಮ 33 ರನ್​ ಗಳಿಸಿ ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!