ASIAN GAMES 2023 | 25 ಮೀಟರ್ ರೈಫಲ್‌ನಲ್ಲಿ ಚಿನ್ನಕ್ಕೆ ಮುತ್ತಿಟ್ಟ ಭಾರತದ ವನಿತೆಯರು!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಏಷ್ಯನ್ ಗೇಮ್ಸ್‌ನ ಮಹಿಳೆಯರ 25 ಮೀಟರ್ ರೈಫಲ್ ಸ್ಪರ್ಧೆಯಲ್ಲಿ ಟೀಂ ಇಂಡಿಯಾ ವನಿತೆಯರು ಚಿನ್ನಕ್ಕೆ ಮುತ್ತಿಟ್ಟಿದ್ದಾರೆ.

ಮನು ಭಾಕರ್, ಇಶಾ ಸಿಂಗ್ ಹಾಗೂ ರಿದಮ್ ಸಾಂಗ್ವಾನ್ ಚಿನ್ನದ ಪದಕ ಗೆದ್ದು ಬೀಗಿದ್ದಾರೆ. ಒಟ್ಟಾರೆ ಭಾರತ ಈವರೆಗೂ ಏಷ್ಯನ್ ಗೇಮ್ಸ್‌ನಲ್ಲಿ ನಾಲ್ಕು ಚಿನ್ನದ ಪದಕ ಗಳಿಸಿದೆ.

ಭಾರತ 1,759 ಅಂಕಗಳನ್ನು ಗಳಿಸಿ ಮೊದಲ ಸ್ಥಾನದಲ್ಲಿದ್ದರೆ, ಚೀನಾ 1,756 ಅಂಕದೊಂದಿದೆ ಎರಡನೇ ಸ್ಥಾನದಲ್ಲಿದೆ. ಇನ್ನು 1,742 ಅಂಕದೊಂದಿಗೆ ಕೊರಿಯಾ ಮೂರನೇ ಸ್ಥಾನದಲ್ಲಿದೆ.

ಇನ್ನು ಮಹಿಳೆಯರ 50 ಮೀಟರ್ ರೈಫಲ್‌ನಲ್ಲಿ ಭಾರತಕ್ಕೆ ಬೆಳ್ಳಿ ಪದಕ ದೊರೆತಿದೆ. ಮೂವರು ಶೂಟರ್‌ಗಳು ಅತ್ಯುತ್ತಮ ಪ್ರದರ್ಶನ ನೀಡಿದ್ದು, ಆಶಿ ಚೌಕ್ಸೆ, ಮಾನಿನಿ ಕೌಶಿಕ್ ಹಾಗೂ ಸಿಫ್ಟ್ ಕೌರ್ ಸಮ್ರಾ ಒಟ್ಟು 1,764 ಅಂಕಗಳನ್ನು ಗಳಿಸಿ ಬೆಳ್ಳಿ ಪದಕ ಗಳಿಸಿದ್ದಾರೆ. ಚೀನಾ ಮೊದಲ ಸ್ಥಾನ ಹಾಗೂ ದಕ್ಷಿಣ ಕೊರಿಯಾ ಮೂರನೇ ಸ್ಥಾನದಲ್ಲಿದೆ.

https://x.com/Media_SAI/status/1706869902634856895?s=20

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!