BIG NEWS | ಭಾರತ ಮಹಿಳಾ ಕ್ರಿಕೆಟ್ ತಂಡದ ನಾಯಕಿ ಹರ್ಮನ್ ಪ್ರೀತ್ ಕೌರ್ ಅಮಾನತು

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಬಾಂಗ್ಲಾದೇಶ ವಿರುದ್ಧ 3ನೇ ಏಕದಿನ ಪಂದ್ಯದಲ್ಲಿ ಸ್ಟಂಪ್ಸ್‌ಗೆ ಬ್ಯಾಟ್‌ನಿಂದ ಹೊಡೆದ ಅನುಚಿತ ವರ್ತನೆ ತೋರಿದ ಭಾರತೀಯ ಮಹಿಳಾ ಕ್ರಿಕೆಟ್ ತಂಡದ ನಾಯಕಿ ಹರ್ಮನ್‌ಪ್ರೀತ್ ಕೌರ್‌ ಅವರಿಗೆ ಅಂತಾರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್ (International Cricket Council -ICC) ಮಂಗಳವಾರ ನೀತಿ ಸಂಹಿತೆಯನ್ನು ಉಲ್ಲಂಘಿಸಿದ್ದಕ್ಕಾಗಿ ದಂಡ ವಿಧಿಸಿದೆ.

ಜೊತೆಗೆ ಮುಂದಿನ ಎರಡು ಅಂತಾರಾಷ್ಟ್ರೀಯ ಪಂದ್ಯಗಳಿಗೆ ಅಮಾನತುಗೊಳಿಸಲಾಗಿದೆ.

ಭಾರತ ಹಾಗೂ ಬಾಂಗ್ಲಾದೇಶ ನಡುವಿನ ಮೂರನೇ ಹಾಗೂ ನಿರ್ಣಾಯಕ ಏಕದಿನ ಪಂದ್ಯದಲ್ಲಿ ಅಂಪೈರ್ ನೀಡಿದ ಔಟ್ ತೀರ್ಪಿಗೆ ಮೈದಾನದಲ್ಲಿ ಕೌರ್ ಅಸಮಾಧಾನ ವ್ಯಕ್ತಪಡಿಸಿದ್ದರು. ಈ ವೇಳೆ ಸ್ಟಂಪ್ಸ್‌ಗೆ ಬ್ಯಾಟ್‌ನಿಂದ ಹೊಡೆದು , ಅಂಪೈರ್‌ಗಳನ್ನು ಬಹಿರಂಗವಾಗಿ ಟೀಕಿಸಿದ್ದರು.

ಹೀಗಾಗಿ ಐಸಿಸಿ ನೀತಿ ಸಂಹಿತೆಯ ಎರಡು ಪ್ರತ್ಯೇಕ ಉಲ್ಲಂಘನೆ ಹಿನ್ನೆಲೆ ಕೌರ್ ಅವರನ್ನು ಮುಂದಿನ ಎರಡು ಅಂತರರಾಷ್ಟ್ರೀಯ ಪಂದ್ಯಗಳಿಂದ ಅಮಾನತುಗೊಳಿಸಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!