ದಕ್ಷಿಣ ಆಫ್ರಿಕಾ ವಿರುದ್ಧ ಸರಣಿ ಕ್ಲೀನ್​ಸ್ವೀಪ್ ಮಾಡಿದ ಭಾರತದ ವನಿತೆಯರ ಟೀಮ್!

ಹೊಸದಿಗಂತ ಡಿಜಿಟಲ್ ಡೆಸ್ಕ್:

ದಕ್ಷಿಣ ಆಫ್ರಿಕಾ ವಿರುದ್ಧ ನಡೆದ ಮೂರನೇ ಮತ್ತು ಕೊನೆಯ ಪಂದ್ಯವನ್ನು 6 ವಿಕೆಟ್​ಗಳಿಂದ ಗೆಲ್ಲುವ ಮೂಲಕ ಭಾರತದ ವನಿತೆಯರು ಏಕದಿನ ಸರಣಿಯನ್ನು 3-0 ಅಂತರದಿಂದ ಸರಣಿ ಕ್ಲೀನ್​ಸ್ವೀಪ್ ಮಾಡಿದ್ದಾರೆ.

ಮೂರು ಪಂದ್ಯಗಳ ಏಕದಿನ ಸರಣಿಗೆ ಆತಿಥ್ಯ ವಹಿಸಿದ್ದ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಭಾರತದ ವನಿತೆಯರುಗೆದ್ದು ಬೀಗಿದರು.

ಭಾರತ ತಂಡದ ಹಿರಿಯ ಬ್ಯಾಟರ್​ ಸ್ಮೃತಿ ಮಂಧಾನ ಮೊದಲೆರಡು ಪಂದ್ಯಗಳಲ್ಲಿ ಸತತ ಶತಕ ಬಾರಿಸಿದರು. ಮೂರನೇ ಪಂದ್ಯದಲ್ಲಿ ಶತಕದ ಅಂಚಿನಲ್ಲಿ (90) ಎಡವಿ ಮೂರನೇ ಹಂಡ್ರೆಡ್​ನಿಂದ ತಪ್ಪಿಸಿಕೊಂಡರು. ಮೊದಲ ಪಂದ್ಯದಲ್ಲಿ 117, ಎರಡನೇ ಪಂದ್ಯದಲ್ಲಿ 136 ರನ್​ ಗಳಿಸಿದ್ದರು.

ಮೂರನೇ ಪಂದ್ಯದಲ್ಲಿ ಭಾರತ ವನಿತೆಯರು ಪ್ರಯಾಸವಿಲ್ಲದೇ ಗೆಲುವು ಸಾಧಿಸಿದರು. ಮೊದಲು ಬ್ಯಾಟ್​ ಮಾಡಿದ ದಕ್ಷಿಣ ಆಫ್ರಿಕಾ ವನಿತೆಯರು 50 ಓವರ್​ಗಳಲ್ಲಿ 8 ವಿಕೆಟ್​ಗೆ 215 ರನ್​ ಗುರಿ ನೀಡಿದರು. ಭಾರತ 40.4 ಓವರ್​ಗಳಲ್ಲಿ 220 ರನ್​ ಗಳಿಸಿ ಗೆಲುವಿನ ಕೇಕೆ ಹಾಕಿತು.

ಕೊನೆಯ ಪಂದ್ಯದಲ್ಲಿ ರನ್​ ಮಳೆ ಹರಿಸಿದ ಸ್ಮೃತಿ ಮಂಧಾನ ಶತಕ ವಂಚಿತರಾದರು. 83 ಎಸೆತಗಳಲ್ಲಿ 11 ಬೌಂಡರಿಗಳ ಸಮೇತ 90 ರನ್​ ಗಳಿಸಿದರು. ಶೆಫಾಲಿ ವರ್ಮಾ 25, ಪ್ರಿಯಾ ಪೂನಿಯಾ 28, ನಾಯಕಿ ಹರ್ಮನ್​ಪ್ರೀತ್​ ಕೌರ್​ 42 ಗಳಿಸಿದರು. ಕೊನೆಯಲ್ಲಿ ಜೆಮಿಮಾ ರೋಡ್ರಿಗಸ್​ 19, ರಿಚಾ ಘೋಷ್​ 6 ರನ್​ ಗಳಿಸಿ ಗೆಲುವಿನ ಶಾಸ್ತ್ರ ಮುಗಿಸಿದರು.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!