ಹೊಸದಿಗಂತ ಡಿಜಿಟಲ್ ಡೆಸ್ಕ್:
ಐಸಿಸಿ ವಿಶ್ವಕಪ್‌ನ ಆರಂಭಿಕ ಎರಡು ಪಂದ್ಯಗಳಲ್ಲಿ ಭಾರತ ತಂಡ ದಕ್ಷಿಣ ಆಫ್ರಿಕಾ ಮತ್ತು ಆಸ್ಟ್ರೇಲಿಯಾ ವಿರುದ್ಧ ಸತತ ಸೋಲುಗಳನ್ನು ಅನುಭವಿಸಿದೆ.
ಇದೀಗ ಭಾರತೀಯ ಮಹಿಳಾ ಕ್ರಿಕೆಟ್ ತಂಡವು ಉಜ್ಜಯಿನಿಯ ಮಹಾಕಾಳೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ ಆಶೀರ್ವಾದ ಪಡೆಯಿತು. ಆಟಗಾರ್ತಿಯರು ಬೆಳಗಿನ ಜಾವ ಭಸ್ಮ ಆರತಿಯಲ್ಲಿ ಭಾಗವಹಿಸಿ ನಂದಿ ಸಭಾಂಗಣದಲ್ಲಿ ಪ್ರಾರ್ಥನೆ ಸಲ್ಲಿಸಿದರು.
ದಕ್ಷಿಣ ಆಫ್ರಿಕಾ ಮತ್ತು ಆಸ್ಟ್ರೇಲಿಯಾ ವಿರುದ್ಧ ವೈಜಾಗ್‌ನಲ್ಲಿ ಎದುರಾದ ಸತತ ಮೂರು ವಿಕೆಟ್‌ಗಳ ಸೋಲು ಭಾರತದ ವಿಶ್ವಕಪ್ ಅಭಿಯಾನವನ್ನು ಸಂಕಷ್ಟಕ್ಕೆ ಸಿಲುಕುವಂತೆ ಮಾಡಿದೆ. ಹರ್ಮನ್‌ಪ್ರೀತ್ ಕೌರ್ ನೇತೃತ್ವದ ಆತಿಥೇಯ ತಂಡವು ನಾಲ್ಕು ಪಂದ್ಯಗಳಿಂದ ನಾಲ್ಕು ಅಂಕಗಳನ್ನು ಗಳಿಸಿ 0.682 ರ ನಿವ್ವಳ ರನ್ ರೇಟ್‌ನೊಂದಿಗೆ ಪಾಯಿಂಟ್ ಪಟ್ಟಿಯಲ್ಲಿ 4ನೇ ಸ್ಥಾನದಲ್ಲಿದೆ, ಇನ್ನೂ ಮೂರು ಲೀಗ್ ಹಂತದ ಪಂದ್ಯಗಳು ಬಾಕಿ ಉಳಿದಿವೆ. ಸೆಮಿಫೈನಲ್ ಭರವಸೆಯನ್ನು ಜೀವಂತವಾಗಿಡಬೇಕಾದರೆ ತಂಡಕ್ಕೆ ಉಳಿದ ಪಂದ್ಯಗಳು ಮಾಡು ಇಲ್ಲವೇ ಮಡಿ ಪಂದ್ಯವಾಗಿದೆ.