ಭಾರತ ಕುಸ್ತಿ ಫೆಡರೇಷನ್ ಚುನಾವಣೆ: ಮಧ್ಯಪ್ರವೇಶಕ್ಕೆ ಸುಪ್ರೀಂ ಕೋರ್ಟ್‌ ನಿರಾಕರಣೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಭಾರತ ಕುಸ್ತಿ ಫೆಡರೇಷನ್ (ಡಬ್ಲ್ಯುಎಫ್‌ಐ) ಚುನಾವಣೆ ಸಂಬಂಧ ಮಧ್ಯಪ್ರವೇಶಕ್ಕೆ ಸುಪ್ರೀಂ ಕೋರ್ಟ್‌ ಮಂಗಳವಾರ ನಿರಾಕರಿಸಿದೆ.

ಪಂಜಾಬ್‌ ಮತ್ತು ಹರಿಯಾಣ ಹೈಕೋರ್ಟ್‌ ನೀಡಿರುವ ತಡೆಯಾಜ್ಞೆಗೆ ಸಂಬಂಧಿಸಿದಂತೆ ಆಗಸ್ಟ್‌ 11ರಂದು ಆಂಧ್ರಪ್ರದೇಶದ ಅಮೆಚೂರ್‌ ಕುಸ್ತಿ ಅಸೋಸಿಯೇಷನ್‌ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ನ್ಯಾಯಮೂರ್ತಿಗಳಾದ ಅಭಯ್‌ ಎಸ್‌.ಓಕಾ ಹಾಗೂ ಪಂಕಜ್‌ ಮಿಥಾಲ್‌ ಅವರಿದ್ದ ವಿಭಾಗೀಯ ನ್ಯಾಯಪೀಠವು ನಡೆಸಿತು.

ನಾವು ಏಕೆ ಇದರಲ್ಲಿ ಮಧ್ಯಪ್ರವೇಶಿಸಬೇಕು?’ ಎಂದು ಪ್ರಶ್ನಿಸಿದ ನ್ಯಾಯಪೀಠವು, ‘ಮಧ್ಯಂತರ ತಡೆಯಾಜ್ಞೆ ತೆರವುಗೊಳಿಸುವಂತೆ ಹೈಕೋರ್ಟ್‌ಗೆ ಮನವಿ ಮಾಡಿ, ಹೈಕೋರ್ಟ್‌ನಲ್ಲಿಯೇ ಅರ್ಜಿ ಸಲ್ಲಿಸಿ ಸಮಸ್ಯೆ ಬಗೆಹರಿಸಿಕೊಳ್ಳಿ’ ಎಂದು ಸೂಚಿಸಿತು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here