May 26, 2026
Tuesday, May 26, 2026
spot_img

‘ವಿಸ್ಡನ್’ ಪಟ್ಟಿಯಲ್ಲಿ ಭಾರತೀಯರ ದರ್ಬಾರ್: ನಾಲ್ವರು ಸ್ಟಾರ್ ಆಟಗಾರರಿಗೆ ಒಲಿದ ಗೌರವ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಕ್ರಿಕೆಟ್ ಲೋಕದ ಅತ್ಯಂತ ಪ್ರತಿಷ್ಠಿತ ಗೌರವಗಳಲ್ಲಿ ಒಂದಾದ ‘ವಿಸ್ಡನ್ ಕ್ರಿಕೆಟರ್ಸ್ ಆಫ್ ದಿ ಇಯರ್ 2026’ ಪಟ್ಟಿಯಲ್ಲಿ ಈ ಬಾರಿ ಭಾರತ ಐತಿಹಾಸಿಕ ಸಾಧನೆ ಮಾಡಿದೆ. ಮೊದಲ ಬಾರಿಗೆ ಐವರ ಪಟ್ಟಿಯಲ್ಲಿ ನಾಲ್ವರು ಭಾರತೀಯ ಆಟಗಾರರು ಸ್ಥಾನ ಪಡೆದಿರುವುದು ಭಾರತೀಯ ಕ್ರಿಕೆಟ್‌ಗೆ ದೊಡ್ಡ ಗೌರವವಾಗಿ ಪರಿಗಣಿಸಲಾಗಿದೆ.

ಇಂಗ್ಲೆಂಡ್ ಬೇಸಿಗೆ ಸೀಸನ್‌ನಲ್ಲಿ ತೋರಿದ ಅದ್ಭುತ ಪ್ರದರ್ಶನದ ಆಧಾರದ ಮೇಲೆ ಈ ಆಯ್ಕೆ ನಡೆದಿದ್ದು, ಭಾರತ ತಂಡದ ಪ್ರಭಾವ ಸ್ಪಷ್ಟವಾಗಿ ಗೋಚರಿಸಿದೆ. ಈ ವರ್ಷದ ಪಟ್ಟಿಯಲ್ಲಿ ಶುಭಮನ್ ಗಿಲ್, ರಿಷಭ್ ಪಂತ್, ರವೀಂದ್ರ ಜಡೇಜಾ ಮತ್ತು ಮೊಹಮ್ಮದ್ ಸಿರಾಜ್ ಸ್ಥಾನ ಪಡೆದಿದ್ದಾರೆ. ಜೊತೆಗೆ ಇಂಗ್ಲೆಂಡ್‌ನ ಹಸೀಬ್ ಹಮೀದ್ ಐದನೇ ಆಟಗಾರರಾಗಿ ಆಯ್ಕೆಯಾಗಿದ್ದಾರೆ.

ಇದನ್ನೂ ಓದಿ:

ಇಂಗ್ಲೆಂಡ್ ಪ್ರವಾಸದ ಟೆಸ್ಟ್ ಸರಣಿಯಲ್ಲಿ ಗಿಲ್ ರನ್ ಮಳೆ ಹರಿಸಿದ್ದು, ಎಡ್ಜ್‌ಬಾಸ್ಟನ್ ಟೆಸ್ಟ್‌ನಲ್ಲಿ ಅವರ ಭಾರೀ ಸ್ಕೋರ್ ಗಮನ ಸೆಳೆದಿತ್ತು. ಅಪಘಾತದ ಬಳಿಕ ಭರ್ಜರಿ ಕಮ್‌ಬ್ಯಾಕ್ ಮಾಡಿದ ಪಂತ್, ನಿರ್ಣಾಯಕ ಕ್ಷಣಗಳಲ್ಲಿ ಸ್ಫೋಟಕ ಬ್ಯಾಟಿಂಗ್ ಮೂಲಕ ಮೆಚ್ಚುಗೆ ಪಡೆದರು. ಜಡೇಜಾ ಬ್ಯಾಟ್ ಮತ್ತು ಬಾಲ್ ಎರಡರಲ್ಲೂ ಮ್ಯಾಜಿಕ್ ಮಾಡಿ ಆಲ್‌ರೌಂಡ್ ಸಾಮರ್ಥ್ಯ ತೋರಿಸಿದರೆ, ಸಿರಾಜ್ ತಮ್ಮ ಸ್ವಿಂಗ್ ಬೌಲಿಂಗ್ ಮೂಲಕ ಎದುರಾಳಿ ಬ್ಯಾಟರ್‌ಗಳಿಗೆ ಕಂಟಕವಾದರು.

ಇದೇ ವೇಳೆ ಮಹಿಳಾ ವಿಭಾಗದಲ್ಲಿ ದೀಪ್ತಿ ಶರ್ಮಾ, ಟಿ20 ವಿಭಾಗದಲ್ಲಿ ಅಭಿಷೇಕ್ ಶರ್ಮಾ, ಹಾಗೂ ವಿಶ್ವದ ಪ್ರಮುಖ ಪುರುಷ ಕ್ರಿಕೆಟಿಗರಾಗಿ ಮಿಚೆಲ್ ಸ್ಟಾರ್ಕ್ ಗೌರವಕ್ಕೆ ಪಾತ್ರರಾಗಿದ್ದಾರೆ. ಈ ಆಯ್ಕೆಯೊಂದಿಗೆ ಭಾರತೀಯ ಕ್ರಿಕೆಟ್ ಮತ್ತೊಮ್ಮೆ ಜಾಗತಿಕ ಮಟ್ಟದಲ್ಲಿ ತನ್ನ ಪ್ರಭಾವವನ್ನು ಸಾಬೀತುಪಡಿಸಿದೆ. 2026ರ ವಿಸ್ಡನ್ ಪಟ್ಟಿ ಭಾರತೀಯ ಅಭಿಮಾನಿಗಳಿಗೆ ಹೆಮ್ಮೆಯ ಕ್ಷಣವಾಗಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !