ಹೊಸದಿಗಂತ ಡಿಜಿಟಲ್ ಡೆಸ್ಕ್:
ಭಾರತೀಯ ವಿದ್ಯಾರ್ಥಿಗಳನ್ನು ಉಕ್ರೇನ್ ಒತ್ತೆಯಾಳಾಗಿ ಇಟ್ಟುಕೊಂಡಿದೆ. ಅವರಿಗೆ ಥಳಿಸಿ ಹಿಂಸೆ ನೀಡಲಾಗುತ್ತಿದೆ ಎಂಬ ಆರೋಪ ಕೇಳಿಬಂದಿದ್ದು, ಭಾರತ ವಿದೇಶಾಂಗ ಸಚಿವಾಲಯ ಇದನ್ನು ಸ್ಪಷ್ಟವಾಗಿ ನಿರಾಕರಿಸಿದೆ. ರಷ್ಯಾ ಆರೋಪ ಕುರಿತು ಸ್ಪಷ್ಟನೆ ನೀಡಿದ ಕೇಂದ್ರ ಸರ್ಕಾರ, ಈ ರೀತಿ ಒತ್ತೆ ಬಗ್ಗೆ ಯಾವುದೇ ವರದಿಗಳಿಲ್ಲ ಎಂದು ಹೇಳಿದೆ.
ಉಕ್ರೇನ್‌ನಲ್ಲಿರುವ ಭಾರತದ ವಿದ್ಯಾರ್ಥಿಗಳನ್ನು ಉಕ್ರೇನ್ ಭದ್ರತಾ ಪಡೆಗಳು ಒತ್ತೆಯಾಗಿ ಇರಿಸಿಕೊಂಡಿದೆ ಎಂದು ಭಾರತದಲ್ಲಿರುವ ರಷ್ಯಾದ ರಾಯಭಾರಿ ಕಚೇರಿ ದೂರಿದೆ. ನಿನ್ನೆಯಷ್ಟೇ ಪ್ರಧಾನಿ ಮೋದಿ ಹಾಗೂ ರಷ್ಯಾ ಅಧ್ಯಕ್ಷ ಪುಟಿನ್ ಮಾತನಾಡಿದ್ದು, ಭಾರತೀಯರ ಸ್ಥಳಾಂತರದ ಬಗ್ಗೆ ಚರ್ಚೆ ನಡೆಸಿದ್ದಾರೆ.