ಯುದ್ಧ ಪೀಡಿತ ಸುಡಾನ್ ನಿಂದ ಭಾರತೀಯರು ಸುರಕ್ಷಿತವಾಗಿ ವಾಪಾಸ್: ಕೇಂದ್ರ ಸಚಿವೆ ಮೀನಾಕ್ಷಿ ಲೇಖಿ

ಹೊಸದಿಗಂತ ವರದಿ, ಮೈಸೂರು:

ಯುದ್ಧಪೀಡಿತ ಸುಡಾನ್ ದೇಶದಲ್ಲಿ ಸಿಲುಕಿರುವ ಭಾರತೀಯರನ್ನು ಕರೆತರುವ ಪ್ರಯತ್ನವನ್ನು ಕೇಂದ್ರ ಸರ್ಕಾರ ನಡೆಸುತ್ತಿದೆ ಎಂದು ಕೇಂದ್ರ ವಿದೇಶಾಂಗ ವ್ಯವಹಾರಗಳ ಸಚಿವೆ ಮೀನಾಕ್ಷಿ ಲೇಖಿ ತಿಳಿಸಿದರು.
ಶುಕ್ರವಾರ ಮೈಸೂರಿನ ವಾಣಿವಿಲಾಸ ರಸ್ತೆಯಲ್ಲಿರುವ ಬಿಜೆಪಿ ಮೈಸೂರು ವಿಭಾಗ ಮಾಧ್ಯಮ ಕೇಂದ್ರದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾತನಾಡಿದ ಅವವರು, ಸುಡಾನ್ ದೇಶದಲ್ಲಿ ಸಿಲುಕಿರುವ ಭಾರತೀಯರನ್ನು, ಅದರಲ್ಲೂ ಕರ್ನಾಟಕದವರನ್ನು ಸುರಕ್ಷಿತವಾಗಿ ಕರೆತರುವುದಕ್ಕೆ ಪ್ರಧಾನ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಆಪರೇಷನ್ ಕಾವೇರಿ ನಡೆಸುತ್ತಿದ್ದಾರೆ. ಈಗಾಗಲೇ ಆ ದೇಶದಿಂದ ನೂರಾರು ಮಂದಿಯನ್ನು ಕರೆತರಲಾಗಿದೆ. ಮೂರನೇ ಹಂತದಲ್ಲಿ ಮತ್ತಷ್ಟು ಜನರನ್ನು ಕರೆತರಲಾಗುತ್ತಿದೆ ಉಕ್ರೇನ್- ರಷ್ಯಾ ಯುದ್ಧದಲ್ಲಿ ಸಿಲುಕಿದ್ದ ಭಾರತೀಯರನ್ನು ಪ್ರಧಾನ ಮಂತ್ರಿ ನರೇಂದ್ರ ಮೋದಿ ಸರ್ಕಾರ ಸುರಕ್ಷಿತವಾಗಿ ಕರೆತಂದಿದೆ. ಇದೇ ರೀತಿ ವಿದೇಶಗಳಲ್ಲಿ ಹಲವು ಸಂಕಷ್ಟ ಪರಿಸ್ಥಿತಿಯಲ್ಲಿ ಸಿಲುಕಿದ್ದ ಭಾರತೀಯರನ್ನು ಸುರಕ್ಷಿತವಾಗಿ ಕೇಂದ್ರ ಸರ್ಕಾರ ಕರೆತಂದಿದೆ. ಅದೇ ರೀತಿ ಈಗ ಸುಡಾನ್‌ನಿಂದ ಭಾರತೀಯರನ್ನು ಸುರಕ್ಷಿತವಾಗಿ ಯಶಸ್ವಿಯಾಗಿ ಕರೆತರುತಿದೆ ಎಂದು ಹೇಳಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!