ಉಕ್ರೇನ್‌ ನಲ್ಲಿ ಸಿಲುಕಿರುವ ಭಾರತೀಯರನ್ನು ನೋಡಿದರೆ ಬೇಸರವಾಗುತ್ತೆ: ಸುಪ್ರೀಂ ಕೋರ್ಟ್‌

ಹೊಸದಿಗಂತ ಡಿಜಿಟಲ್ ಡೆಸ್ಕ್:

ಉಕ್ರೇನ್‌ ನಲ್ಲಿ ಸಿಲುಕಿರುವ ಭಾರತೀಯರ ಕಷ್ಟ ಕಂಡು ಸುಪ್ರೀಂ ಕೋರ್ಟ್‌ ಬೇಸರ ವ್ಯಕ್ತಪಡಿಸಿದ್ದು, ಉಕ್ರೇನ್‌ನಲ್ಲಿ ಸಿಲುಕಿರುವ ಜನರು ಮತ್ತು ಭಾರತೀಯ ವಿದ್ಯಾರ್ಥಿಗಳನ್ನು ನೋಡಿದರೆ ಬೇಸರ ಎನಿಸುತ್ತದೆ ಎಂದಿದೆ.
ಉಕ್ರೇನ್‌ ನಲ್ಲಿ ಸಿಲುಕಿರುವ ಭಾರತೀಯರಿಗೆ ನೆರವು ನೀಡಲು ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡುವಂತೆ ಕೋರಿ ಸುಪ್ರೀಂ ಕೋರ್ಟ್‌ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ (ಪಿಐಎಲ್) ಸಲ್ಲಿಸಲಾಗಿದೆ.
ಈ ಕುರಿತು ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್, ರಷ್ಯಾ ಮತ್ತು ಉಕ್ರೇನ್ ನಡುವೆ ನಡೆಯುತ್ತಿರುವ ಸಂಘರ್ಷದ ಬಗ್ಗೆ ಸುಪ್ರೀಂ ಕೋರ್ಟ್ ಏನನ್ನೂ ಮಾಡಲು ಸಾಧ್ಯವಿಲ್ಲ ಎಂದು ಮುಖ್ಯ ನ್ಯಾಯಮೂರ್ತಿ ಎನ್‌ವಿ ರಮಣ ಅವರಿದ್ದ ನ್ಯಾಯಪೀಠ ಅಭಿಪ್ರಾಯ ವ್ಯಕ್ತಪಡಿಸಿದೆ.
ಅಲ್ಲಿ ಸಿಲುಕಿರುವವರನ್ನು ನೋಡಿದರೆ ಪಾಪ ಎಂದೆನಿಸತ್ತದೆ. ಆದರೆ ಕೋರ್ಟ್ ಏನು ಮಾಡಲು ಸಾಧ್ಯ? ಯುದ್ಧವನ್ನು ನಿಲ್ಲಿಸಲು ನಾವು ರಷ್ಯಾ ಅಧ್ಯಕ್ಷರಿಗೆ ನಿರ್ದೇಶನ ನೀಡಬಹುದೇ? ಎಂದು ಕೇಳಿದೆ.
ಸಾಮಾಜಿಕ ಮಾಧ್ಯಮಗಳಲ್ಲಿ, ಸಿಜೆಐ ಏನು ಮಾಡುತ್ತಿದ್ದಾರೆಂದು ಹೇಳುವ ಕೆಲವು ವೀಡಿಯೊಗಳನ್ನು ನಾನು ನೋಡಿದ್ದೇನೆ. ನಾವು ಅವರ ಬಗ್ಗೆ ಸಹಾನುಭೂತಿ ಹೊಂದಿದ್ದೇವೆ’ ಎಂದು ಸಿಜೆಐ ಹೇಳಿದರು.
ಅಲ್ಲಿರುವ ವಿದ್ಯಾರ್ಥಿಗಳ ಬಗ್ಗೆ ಕಾಳಜಿ ವಹಿಸಬೇಕೆಂಬ ವಕೀಲರ ಮನವಿಗೆ ಉತ್ತರಿಸಿದ ಪೀಠವು, ಯಾವ ಸರ್ಕಾರವು ಕಾಳಜಿ ವಹಿಸುತ್ತದೆ? ಎಂದು ಕೇಳಿತು. ಭಾರತ ಸರ್ಕಾರ ತನ್ನ ಕೆಲಸವನ್ನು ಮಾಡುತ್ತಿದೆ. ಈ ವಿಷಯದಲ್ಲಿ ಅಟಾರ್ನಿ ಜನರಲ್ ಅವರ ಅಭಿಪ್ರಾಯವನ್ನು ಪಡೆಯುವುದಾಗಿ ಪೀಠವು ತಿಳಿಸಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!