ಡಿಜಿಟಲಿಕರಣದತ್ತ ಭಾರತದ ಕೃಷಿ: ಪ್ರಧಾನಿ ಮೋದಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಕೇಂದ್ರ ಬಜೆಟ್​​ನಲ್ಲಿ ಸಾವಯವ ಕೃಷಿಗೆ ಹೆಚ್ಚಿನ ಪ್ರಾಮುಖ್ಯತೆ ನೀಡಲಾಗಿದ್ದು, ಕೃಷಿಯಲ್ಲಿನ ಡಿಜಿಟಲಿಕರಣದತ್ತ ಭಾರತ ಮುನ್ನಡೆಯುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು.

ಹೈದರಾಬಾದ್‌ನ ICRISAT ಕ್ಯಾಂಪಸ್​​​ನ ಅಂತಾರಾಷ್ಟ್ರೀಯ ಬೆಳೆಗಳ ಸಂಶೋಧನಾ ಸಂಸ್ಥೆಯ 50ನೇ ವಾರ್ಷಿಕೋತ್ಸವ ಆಚರಣೆಯಲ್ಲಿ ಮಾತನಾಡಿದ ಅವರು, ಕೃಷಿಯನ್ನು ಸುಲಭ ಮತ್ತು ಸುಸ್ಥಿರಗೊಳಿಸಲು ಇತರ ರಾಷ್ಟ್ರಗಳಿಗೆ ಸಹಾಯ ಮಾಡುವ ಐದು ದಶಕಗಳ ಅನುಭವವನ್ನು ICRISAT ಹೊಂದಿದೆ.50 ವರ್ಷಗಳ ಕಾಲ ವಿವಿಧ ಬೆಳೆಗಳ ಬಗೆಗಿನ ನಿಮ್ಮ ಸಂಶೋಧನೆಗೆ ಅಭಿನಂದನೆಗಳು. ಐದು ದಶಕಗಳ ಅವಧಿಯಲ್ಲಿ ಭಾರತ ಕೃಷಿಯಲ್ಲಿ ಸಮೃದ್ಧಿ ಸಾಧಿಸಿದ್ದು, ಮುಂದಿನ 50 ವರ್ಷಗಳಲ್ಲಿ ಹೆಚ್ಚಿನ ಸಂಶೋಧನೆ ಹೊರಬರಲಿ ಎಂದು ನಾನು ಬಯಸುತ್ತೇನೆ ಎಂದರು.

ಇದೇ ವೇಳೆ ICRISAT ನ 50 ನೇ ಸಂಸ್ಥಾಪನಾ ದಿನದ ಸಂದರ್ಭದಲ್ಲಿ ಪ್ರಧಾನಿ ಮೋದಿ ಅವರು ಸ್ಮರಣಾರ್ಥ ಅಂಚೆ ಚೀಟಿಯನ್ನು ಬಿಡುಗಡೆ ಮಾಡಿದರು.

ಕೇಂದ್ರ ಬಜೆಟ್​​ನಲ್ಲಿ ಸಾವಯವ ಕೃಷಿಗೆ ಹೆಚ್ಚಿನ ಪ್ರಾಮುಖ್ಯತೆ ನೀಡಿದ್ದೇವೆ. ಕೃಷಿಯಲ್ಲಿ ಹೆಚ್ಚಿನ ತಂತ್ರಜ್ಞಾನ ಬಳಕೆ ಮಾಡಲು ಮುಂದಾಗಿದ್ದು, ಇದೀಗ ಡಿಜಿಟಲ್​ ಕೃಷಿಯತ್ತ ಗುರಿ ಹೊಂದಿದ್ದೇವೆ. ಕೃಷಿಯಲ್ಲಿ ಡ್ರೋನ್ ಬಳಕೆಗೆ ಹಣ ಮಂಜೂರು ಮಾಡಲಾಗಿದ್ದು, ಸಾಗುವಳಿ ಭೂಮಿ ಡಿಜಿಟಲೀಕರಣಗೊಳ್ಳುತ್ತಿದೆ ಎಂದರು

ಭಾರತದಲ್ಲಿ ಶೇಕಡಾ 80 ರಷ್ಟು ರೈತರು ಸಣ್ಣ ರೈತರು ಮತ್ತು ಅವರು ಬಿಕ್ಕಟ್ಟನ್ನು ಎದುರಿಸುತ್ತಿದ್ದಾರೆ. ಹವಾಮಾನ ಬದಲಾವಣೆಗಳು ಅವರ ಮೇಲೆ ನಕಾರಾತ್ಮಕ ಪ್ರಭಾವವನ್ನು ತೋರಿಸುತ್ತಿವೆ. ಅವರ ಕೃಷಿ ವೆಚ್ಚವನ್ನು ಕಡಿಮೆ ಮಾಡಬೇಕು. ವಿಜ್ಞಾನಿಗಳು ತಮ್ಮ ಕೃಷಿಯನ್ನು ಬಲಪಡಿಸಲು ಹೆಚ್ಚು ಶ್ರಮಿಸಬೇಕಾಗಿದೆ ಎಂದರು.

ದೇಶದ 170 ಜಿಲ್ಲೆಗಳಲ್ಲಿ ಬರ ಪರಿಸ್ಥಿತಿ ನಿರ್ಮಾಣಗೊಂಡಿದೆ. ಇಂತಹ ಕೃಷಿ ಕ್ಷೇತ್ರಗಳಲ್ಲಿ ಇದೀಗ ಆಧುನಿಕ ವಿಧಾನ ಪರಿಚಯ ಮಾಡಲಾಗುತ್ತದೆ . ಡಿಜಿಟಲ್​ ಕೃಷಿಯಿಂದ ಸಾಕಷ್ಟು ಬದಲಾವಣೆಗಳಾಗಿವೆ. ರೈತರು ಸಾವಯವ ಕೃಷಿಯತ್ತ ಗಮನ ಹರಿಸಬೇಕು. ಭಾರತದಲ್ಲಿ ತಾಳೆ ಎಣ್ಣೆ ಉತ್ಪಾದನೆ ಅಭಿವೃದ್ಧಿಯಾಗಬೇಕಿದೆ. ಪಾಮ್​ ಆಯಿಲ್​ ಕೃಷಿಯಿಂದ ತೆಲಂಗಾಣ ಹೆಚ್ಚಿನ ಲಾಭ ಗಳಿಸಿದೆ ಎಂದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!