ಹೊಸದಿಗಂತ ಡಿಜಿಟಲ್ ಡೆಸ್ಕ್:
ಬಾಂಗ್ಲಾದೇಶದಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆ ಮತ್ತು ಹಿಂಸಾಚಾರದ ಹಿನ್ನಲೆಯಲ್ಲಿ ದೆಹಲಿಯಲ್ಲಿ ಸರ್ವಪಕ್ಷ ಸಭೆ ನಡೆದಿದೆ.
ಸಭೆಯಲ್ಲಿ ಬಾಂಗ್ಲಾದೇಶ ಉಚ್ಛಾಟಿತ ಪ್ರಧಾನಿ ಶೇಕ್ ಹಸೀನಾಗೆ ಭಾರತದ ನೆರವು ನೀಡುವ ಕುರಿತು ಮಹತ್ವದ ನಿರ್ಣಯ ಕೈಗೊಳ್ಳಲಾಗಿದೆ. ಸೋಮವಾರ ಸಂಜೆ ಭಾರತಕ್ಕೆ ಆಗಮಿಸಿದ ಬಾಂಗ್ಲಾದೇಶದ ಮಾಜಿ ಪ್ರಧಾನಿ ಶೇಖ್ ಹಸೀನಾ ಅವರಿಗೆ ಭಾರತ ಸಕಲ ರೀತಿಯ ನೆರವು ನೀಡುವುದಾಗಿ ಭರವಸೆ ನೀಡಿದ್ದು, ಮುಂದಿನ ಕ್ರಮವನ್ನು ನಿರ್ಧರಿಸಲು ಸಮಯ ನೀಡಿದೆ ಎನ್ನಲಾಗಿದೆ.
ಬಾಂಗ್ಲಾದೇಶದಲ್ಲಿರುವ 10,000 ಕ್ಕೂ ಹೆಚ್ಚು ಭಾರತೀಯ ವಿದ್ಯಾರ್ಥಿಗಳ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು ಭಾರತ ಸರ್ಕಾರವು ಬಾಂಗ್ಲಾದೇಶ ಸೇನೆಯೊಂದಿಗೆ ನಿರಂತರ ಸಂಪರ್ಕದಲ್ಲಿದೆ ಎಂದು ವಿದೇಶಾಂಗ ಸಚಿವ ಎಸ್ ಜೈಶಂಕರ್ ಮಾಹಿತಿ ನೀಡಿದ್ದಾರೆ.