ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಭಾರತೀಯ ಮಹಿಳಾ ಅಂಧರ ಕ್ರಿಕೆಟ್ ತಂಡವು ಅಂತಾರಾಷ್ಟ್ರೀಯ ಅಂಧರ ಕ್ರೀಡಾ ಫೆಡರೇಶನ್ ವಿಶ್ವ ಕ್ರೀಡಾಕೂಟದಲ್ಲಿ ಆಸ್ಟ್ರೇಲಿಯಾವನ್ನು ಮಣಿಸಿ ಚಿನ್ನದ ಪದಕ ಪಡೆದಿದೆ.
ಬರ್ಮಿಂಗ್ಹ್ಯಾಮ್ನಲ್ಲಿ ನಡೆದ ಫೈನಲ್ ಪಂದ್ಯದಲ್ಲಿ ಆಸೀಸ್ ಟೀಂ ಅನ್ನು 9 ವಿಕೆಟ್ಗಳಿಂದ ಸೋಲಿಸಿ ಭಾರತದ ನಾರಿಯರು ಇತಿಹಾಸ ಬರೆದಿದ್ದಾರೆ.
ಇದಕ್ಕೂ ಮೊದಲು ಆಗಸ್ಟ್ 20ರಂದು ನಡೆದ ಪಂದ್ಯದಲ್ಲೂ ಆಸ್ಟ್ರೇಲಿಯಾ ವಿರುದ್ಧ ಭಾರತೀಯ ಮಹಿಳಾ ತಂಡವು 8 ವಿಕೆಟ್‌ಗಳ ಗೆಲುವು ಸಾಧಿಸಿದ್ದರು. ಆ ಮೂಲಕ ವರ್ಲ್ಡ್ ಗೇಮ್ಸ್ ಅಭಿಯಾನವನ್ನು ಭಾರತ ಪ್ರಭಾವಶಾಲಿ ರೀತಿಯಲ್ಲಿ ಪ್ರಾರಂಭಿಸಿತು.
ನಂತರ ಇಂಗ್ಲೆಂಡ್ ವಿರುದ್ಧದ ಪಂದ್ಯದಲ್ಲೂ ಭಾರತದ ನಾರಿಯರು ಬಿರುಸಿನ ಪ್ರದರ್ಶನ ತೋರಿದ್ದರು. ನಿಗದಿತ 20 ಓವರ್‌ಗಳಲ್ಲಿ 2 ವಿಕೆಟ್ ಕಳೆದುಕೊಂಡು 268ರನ್ಗಳ ಕಲೆ ಹಾಕಿದ್ದರು. ಭಾರತದ ಪರ ಗಂಗವ್ವ ಎಚ್. 60 ಎಸೆತಗಳಲ್ಲಿ 117 ರನ್ ಗಳಿಸಿ ತಂಡ ಗೆಲವಿಗೆ ಪ್ರಮುಖ ಪಾತ್ರವಹಿಸಿದ್ದರು.
History made at @Edgbaston! India are our first ever cricket winners at the IBSA World Games!
Australia VI Women 114/8
India VI Women 43/1 (3.3/9)India VI Women win by 9 wickets.
📸 Will Cheshire pic.twitter.com/1Iqx1N1OCW
— IBSA World Games 2023 (@IBSAGames2023) August 26, 2023