ಹೊಸದಿಗಂತ ಡಿಜಿಟಲ್ ಡೆಸ್ಕ್:
ಭಾರತದ ಕಾಫಿ ರಫ್ತು ಕಳೆದ 5 ವರ್ಷದಲ್ಲಿ ಗಣನೀಯ ಬೆಳವಣಿಗೆ ಸಾಧಿಸಿದ್ದು, ಶೇಕಡ 40ರಷ್ಟು ವೃದ್ಧಿಯನ್ನು ಸಾಧಿಸಿದೆ ಎಂದು ಕಾಫಿಬೋರ್ಡ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಂ. ಕೂರ್ಮಾರಾವ್ ತಿಳಿಸಿದ್ದಾರೆ.
ಕಾಫಿ ಮಂಡಳಿಗೆ ಇಂದು ನವದೆಹಲಿಯ ಮಾಧ್ಯಮ ತಂಡ ಭೇಟಿ ನೀಡಿದ ವೇಳೆ ಮಾತನಾಡಿದ ಅವರು, ಭಾರತದ ಶೇಕಡ 46 ರಷ್ಟು ಪ್ರತಿಶತ ಕಾಫಿ ಯುರೋಪಿಯನ್ ಒಕ್ಕೂಟದ ರಾಷ್ಟ್ರಗಳಿಗೆ ರಫ್ತಾಗುತ್ತಿದೆ. ಇದರ ಜೊತೆಗೆ ಭಾರತದ ಕಾಫಿಯನ್ನು ಬ್ರಾಂಡ್ ಇಂಡಿಯಾ ಕಾಫಿ ಮೂಲಕ ಪ್ರಚುರಪಡಿಸಲಾಗುತ್ತಿದೆ ಎಂದು ತಿಳಿಸಿದ್ದಾರೆ.
ದೇಶದಲ್ಲಿ ಸುಮಾರು 4.90 ಲಕ್ಷ ಹೆಕ್ಟೇರ್‌ನಲ್ಲಿ ಕಾಫಿ ಬೆಳೆಯಲಾಗುತ್ತಿದ್ದು, ಮಧ್ಯಪ್ರಾಚ್ಯ ರಾಷ್ಟ್ರಗಳಾದ ಕೊರಿಯಾ, ಜಪಾನ್‌ನಲ್ಲಿ ಭಾರತೀಯ ಕಾಫಿಗೆ ಬೇಡಿಕೆ ಹೆಚ್ಚಾಗುತ್ತಿದೆ. ಆಂಧ್ರ, ಒಡಿಶಾ, ಈಶಾನ್ಯ ರಾಜ್ಯಗಳಲ್ಲಿ ಕಾಫಿ ಬೆಳಯುವ ಬಗ್ಗೆ ಪ್ರಯೋಗ ನಡೆಯುತ್ತಿದೆ ಎಂದು ಅವರು ಮಾಹಿತಿ ನೀಡಿದ್ದಾರೆ. ಇದೇ ವೇಳೆ ಮಾಧ್ಯಮ ತಂಡ ಕಾಫಿ ಸಂಸ್ಕರಣಾ ಘಟಕ, ಪ್ರಯೋಗಾಲಯ ಹಾಗೂ ಸಂಶೋಧನಾ ಕೇಂದ್ರಕ್ಕೂ ಭೇಟಿ ನೀಡಿ ಪರಿಶೀಲನೆ ನಡೆಸಿದರು.