ಹೊಸದಿಗಂತ ಡಿಜಿಟಲ್ ಡೆಸ್ಕ್:
ಲೋಕಸಭೆಯಲ್ಲಿ ಸಚಿವೆ ನಿರ್ಮಲಾ ಸೀತಾರಾಮನ್ 2023-24 ನೇ ಸಾಲಿನ ಬಜೆಟ್ ಮಂಡನೆ ಭಾಷಣವನ್ನು ಆರಂಭಿಸಿದ್ದು, ಭಾರತದ ಆರ್ಥಿಕತೆ ಸರಿಯಾದ ಹಾದಿಯಲ್ಲಿದೆ ಎಂದಿದ್ದಾರೆ.
ಉಜ್ವಲ ಭವಿಷ್ಯದತ್ತ ಸಾಗುತ್ತಿರುವ ದೇಶದ ಆರ್ಥಿಕತೆಗೆ ಯಾವ ಭೀತಿಯೂ ಇಲ್ಲ. ಕೋವಿಡ್ ಸಮಯದಲ್ಲಿಯೂ ಯಾರೂ ಹಸಿವಿನಿಂದ ಮಲಗಿಲ್ಲ. 28 ತಿಂಗಳು, 80 ಕೋಟಿಗೂ ಹೆಚ್ಚು ಜನರಿಗೆ ಉಚಿತ ಆಹಾರ ಧಾನ್ಯ ಪೂರೈಸಲಾಗಿದೆ ಎಂದಿದ್ದಾರೆ.
ಭಾಷಣ ಆರಂಭಿಸುತ್ತಿದ್ದಂತೆಯೇ ವಿಪಕ್ಷ ನಾಯಕರು ಘೋಷಣೆ ಕೂಗಲು ಆರಂಭಿಸಿದ್ದಾರೆ.