ʼಮುಂದಿನ 25 ವರ್ಷಗಳಲ್ಲಿ 10 ಪಟ್ಟು ಹೆಚ್ಚಾಗಲಿದೆ ಭಾರತದ ಆರ್ಥಿಕತೆ‌ʼ: ಪಿಯೂಷ್‌ ಗೋಯಲ್

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಭಾರತವು ಸಾಮೂಹಿಕ ಪ್ರಯತ್ನದಿಂದ ಜಾಗತಿಕ ಆರ್ಥಿಕ ಶಕ್ತಿಯಾಗಲಿದೆ ಮತ್ತು 2047 ರ ವೇಳೆಗೆ ಭಾರತದ ಆರ್ಥಿಕತೆಯು ಮುಂದಿನ 25 ವರ್ಷಗಳಲ್ಲಿ 10 ಪಟ್ಟು ಹೆಚ್ಚಲಿದೆ ಎಂದು ಅವರು ಎಂದು ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕಾ ಸಚಿವ ಪಿಯೂಷ್ ಗೋಯಲ್ ಹೇಳಿದ್ದಾರೆ .

ಶುಕ್ರವಾರ ಆಂಧ್ರಪ್ರದೇಶದ ಕಾಕಿನಾಡ ಕ್ಯಾಂಪಸ್‌ನ ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಫಾರಿನ್ ಟ್ರೇಡ್ (ಐಐಎಫ್‌ಟಿ) ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಿದ ಅವರು “ರಾಜಕೀಯ ಸ್ಥಿರತೆ, ಹೆಚ್ಚಿನ ಸ್ಪರ್ಧಾತ್ಮಕತೆ, ಸಾಮೂಹಿಕ ಪ್ರಯತ್ನಗಳು ಮತ್ತು ಅಭಿವೃದ್ಧಿಶೀಲ ಆರ್ಥಿಕ ವ್ಯವಸ್ಥೆಯೊಂದಿಗೆ, ಭಾರತವು ವಿಶ್ವದ ಆರ್ಥಿಕ ಶಕ್ತಿಯಾಗಲಿದೆ. ಪ್ರಸ್ತುತ, ಭಾರತದ ಆರ್ಥಿಕತೆಯು 3.5 ಟ್ರಿಲಿಯನ್ ಡಾಲರ್ ಮೌಲ್ಯವನ್ನು ಹೊಂದಿದೆ. ಸಮಗ್ರ ಆರ್ಥಿಕ ಬೆಳವಣಿಗೆ ಮತ್ತು ಸಾಮೂಹಿಕ ಪ್ರಯತ್ನಗಳಿಂದ ಅಭಿವೃದ್ಧಿಶೀಲ ರಾಷ್ಟ್ರವನ್ನು ಅಭಿವೃದ್ಧಿ ಹೊಂದಿದ ರಾಷ್ಟ್ರದ ಮಟ್ಟಕ್ಕೆ ಕೊಂಡೊಯ್ಯಬಹುದು. ಸತತ ಪ್ರಯತ್ನದಿಂದ, ನಾವು ಸ್ವಾತಂತ್ರ್ಯದ 100 ನೇ ವರ್ಷವನ್ನು ಆಚರಿಸುವ 2047 ರ ವೇಳೆಗೆ ಭಾರತದ ಆರ್ಥಿಕತೆಯು ಮುಂದಿನ 25 ವರ್ಷಗಳಲ್ಲಿ ಹತ್ತು ಪಟ್ಟು ತಲುಪಲಿದೆ. ಪರಿಣಿತ ಮಾನವ ಸಂಪನ್ಮೂಲಗಳನ್ನು ಗರಿಷ್ಠ ಪ್ರಮಾಣದಲ್ಲಿ ಲಭ್ಯವಾಗುವಂತೆ ಮಾಡುವ ಮೂಲಕ ಅಭಿವೃದ್ಧಿಯನ್ನು ಸಾಧಿಸಬಹುದು” ಎಂದು ಹೇಳಿದ್ದಾರೆ.

ಭವಿಷ್ಯದಲ್ಲಿ ಭಾರತೀಯ ವಾಣಿಜ್ಯಕ್ಕೆ ಹೆಚ್ಚಿನ ಅಂತರರಾಷ್ಟ್ರೀಯ ಮನ್ನಣೆ ಪಡೆಯಲು ಮಾನವ ಸಂಪನ್ಮೂಲಗಳ ಪರಿಣಿತ ನಿರ್ವಹಣೆ ಅಗತ್ಯ. ಈ ನಿಟ್ಟಿನಲ್ಲಿ ಸ್ಥಳೀಯ ಉತ್ಪನ್ನಗಳು, ಕುಶಲಕರ್ಮಿಗಳು, ನುರಿತ ನೇಕಾರರು ಇತ್ಯಾದಿಗಳಿಗೆ ಉತ್ತೇಜನ ನೀಡಬೇಕಿದೆ. ಆತ್ಮನಿರ್ಭರ ಭಾರತ್ ಅಡಿಯಲ್ಲಿ ಕೇಂದ್ರ ಸರ್ಕಾರದ ಕ್ರಮಗಳು ಮತ್ತು ಬಜೆಟ್‌ಗಳ ವಿಶೇಷ ಹಂಚಿಕೆಗಳು ದೇಶದ ಆರ್ಥಿಕ ವ್ಯವಸ್ಥೆಯನ್ನು ಹೆಚ್ಚು ಬಲಿಷ್ಠಗೊಳಿಸುತ್ತವೆ ಎಂದು ಅವರು ಅಭಿಪ್ರಾಯ ಪಟ್ಟಿದ್ದಾರೆ.

 

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!