ಭಾರತದ ಖ್ಯಾತ ಗಣಿತ ಶಾಸ್ತ್ರಜ್ಞ ಡಾಕ್ಟರ್ ಸಿಆರ್ ರಾವ್ ನಿಧನ

ಹೊಸದಿಗಂತ ಡಿಜಿಟಲ್‌ ಡೆಸ್ಕ್:

ಗಣಿತ ಲೋಕದ ಪಾಲಿಗೆ ಡಾ.ರಾವ್‌ ಎಂದೇ ಖ್ಯಾತಿ ಪಡೆದಿರುವ ಗಣಿತ ಶಾಸ್ತ್ರಜ್ಞರು ಮತ್ತು ಸಂಖ್ಯಾ ಶಾಸ್ತ್ರಜ್ಞರು ಆಗಿರುವ ಡಾಕ್ಟರ್ ಸಿಆರ್ ರಾವ್ (102) ಇಂದು ನಿಧನರಾಗಿದ್ದಾರೆ.

ಅನಾರೋಗ್ಯದಿಂದ ಬಳಲುತ್ತಿದ್ದ ಸಿಆರ್‌ ರಾವ್‌ ಅವರು ಅಮೆರಿಕದಲ್ಲಿ ನಿಧನರಾಗಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿವೆ.

ಗಣಿತಕ್ಕೆ ಸಂಬಂಧಿಸಿದ ಸಂಖ್ಯಾಶಾಸ್ತ್ರ ಕ್ಷೇತ್ರದಲ್ಲಿ ಸಿಆರ್ ರಾವ್ ಅವರು ಮಾಡಿರುವ ಸಾಧನೆಗಾಗಿ ಕೇಂದ್ರ ಸರ್ಕಾರ ಭಾರತದ ಅತ್ಯುನ್ನತ ಪದ್ಮವಿಭೂಷಣ ಪ್ರಶಸ್ತಿಯನ್ನು ನೀಡಿ ಗೌರವಿಸಿದೆ.

ಬಳ್ಳಾರಿ ಜಿಲ್ಲೆಯಲ್ಲಿ ಡಾಕ್ಟರ್ ಸಿಆರ್ ರಾವ್ ಜನನ

ಡಾಕ್ಟರ್ ಸಿಆರ್ ರಾವ್ ಅವರು 1920ರ ಸೆಪ್ಟೆಂಬರ್ 10 ರಂದು ಬಳ್ಳಾರಿ ಜಿಲ್ಲೆಯ ಹಡಗಲಿಯ ತೆಲುಗು ಕುಟುಂಬದಲ್ಲಿ ಜನಿಸಿದ್ದರು. ಬಳಿಕ ಇವರ ಕುಟುಂಬ ಆಂಧ್ರ ಪ್ರದೇಶಕ್ಕೆ ವಲಸೆ ಹೋದರು.

ಆಂಧ್ರ ವಿಶ್ವವಿದ್ಯಾಲಯದಲ್ಲಿ ಗಣಿತ ವಿಷಯದಲ್ಲಿ ಎಂಎಸ್‌ಸಿ ಮುಗಿಸಿದ ಬಳಿಕ ಕೋಲ್ಕತ್ತ ವಿಶ್ವವಿದ್ಯಾಲಯದಲ್ಲಿ ಸಂಖ್ಯಾಶಾಸ್ತ್ರದಲ್ಲಿ ಎಂಎ ಪದವಿ ಪಡೆದರು.

ಅಮೆರಿಕದ ಸ್ಟಾನ್‌ಫರ್ಡ್‌ ವಿವಿ ಸೇರಿದಂತೆ ವಿವಿಧ ವಿಶ್ವವಿದ್ಯಾಲಯಗಳಲ್ಲಿ ಉಪನ್ಯಾಸಕರಾಗಿಗೂ ರಾವ್‌ ಸೇವೆ ಸಲ್ಲಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!