April 16, 2026
Thursday, April 16, 2026
spot_img

ಭಾರತದ ಮೊದಲ ಅಂತಾರಾಷ್ಟೀಯ ʼಹುಲಿ ಶೃಂಗಸಭೆʼ ಕರ್ನಾಟಕದಲ್ಲಿ ನಡೆಯಲಿದೆ, ಎಲ್ಲಿ ಗೊತ್ತಾ?

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಈ ವರ್ಷದ ಅಂತಾರಾಷ್ಟ್ರೀಯ ಹುಲಿ ಶೃಂಗಸಭೆ ಈ ಬಾರಿ ಭಾರತದಲ್ಲಿ ನಡೆಯಲಿದೆ. ಅದರಲ್ಲಿಯೂ ಈ ಪ್ರಮುಖವಾದ ಕಾರ್ಯಕ್ರಮ ಕರ್ನಾಟಕದ ಬಂಡೀಪುರ ಹಾಗೂ ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶದಲ್ಲಿ ನಡೆಯಲಿದೆ.

ಇದೇ ಫೆ.9ರಿಂದ 13ರವರೆಗೆ ಕಾರ್ಯಕ್ರಮ ನಡೆಯಲಿದೆ. ಕಾರ್ಯಾಗಾರ ಹಾಗೂ ತರಬೇತಿ ಕಾರ್ಯಕ್ರಮವನ್ನು ಪರಿಸರ, ಅರಣ್ಯ ಹಾಗೂ ಹವಾಮಾನ ಬದಲಾವಣೆ ಸಚಿವಾಲಯ, ಅಂತಾರಾಷ್ಟ್ರೀಯ ಬಿಗ್ ಕ್ಯಾಟ್ ಅಲಯನ್ಸ್ ಸಂಯುಕ್ತವಾಗಿ ಆಯೋಜಿಸುತ್ತಿವೆ.

ಈ ಕಾರ್ಯಕ್ರಮಕ್ಕೆ 18 ದೇಶಗಳ ಪ್ರತಿನಿಧಿಗಳು ಬರಲಿದ್ದಾರೆ. ಭಾರತವು ವಿಶ್ವದಲ್ಲೇ ಅತಿ ಹೆಚ್ಚು ಹುಲಿಗಳನ್ನು ಹೊಂದಿದ್ದು, ಚಿರತೆ, ಹಿಮ ಚಿರತೆ ಸೇರಿದಂತೆ ಬಿಗ್ ಕ್ಯಾಟ್‌ಗಳ ಸಂರಕ್ಷಣೆಯಲ್ಲಿ ಪ್ರಮುಖ ಪಾತ್ರ ವಹಿಸಿದೆ. ಸಂರಕ್ಷಣೆಗೆ ಆಧುನಿಕ ತಂತ್ರಜ್ಞಾನ ಬಳಕೆ, ಅಂತರರಾಜ್ಯ ಹಾಗೂ ಅಂತರರಾಷ್ಟ್ರೀಯ ಸಹಕಾರ, ಮತ್ತು ಉತ್ತಮ ಕಾರ್ಯಪದ್ಧತಿಗಳ ಕುರಿತು ಈ ಸಭೆಯಲ್ಲಿ ಚರ್ಚೆ ನಡೆಯಲಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !