ಹೊಸದಿಗಂತ ಡಿಜಿಟಲ್ ಡೆಸ್ಕ್:
ಯುಎಸ್ ಕಾಂಗ್ರೆಸ್ ಸಭೆಯಲ್ಲಿ ಎರಡನೇ ಬಾರಿಗೆ ಮಾತನಾಡಲಿರುವ ಭಾರತದ ಮೊದಲ ಪ್ರಧಾನಿ ಎಂಬ ಹೆಗ್ಗಳಿಕೆಗೆ ನರೇಂದ್ರ ಮೋದಿ ಪಾತ್ರರಾಗಿದ್ದಾರೆ. ಜೂ.22 ರಂದು ಅಮೆರಿಕಕ್ಕೆ ಪ್ರಧಾನಿ ಮೋದಿ ಭೇಟಿ ನೀಡಲಿದ್ದು, ಯುಎಸ್ ಕಾಂಗ್ರೆಸ್‌ನ ಜಂಟಿ ಅಧಿವೇಶನವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.
ಭಾರತದ ಭವಿಷ್ಯದ ಬಗೆಗಿನ ದೃಷ್ಟಿಕೋನಗಳ ಬಗ್ಗೆ ಮಾತನಾಡಲಿದ್ದಾರೆ, ಜತೆಗೆ ಜಾಗತಿಕ ಸವಾಲುಗಳ ಕುರಿತಾದ ಮಾತುಕತೆ ನಡೆಯಲಿದೆ. ಈ ಬಗ್ಗೆ ಪ್ರಧಾನಿ ಮೋದಿ ಟ್ವೀಟ್ ಮಾಡಿದ್ದು, ಕಾಂಗ್ರೆಸ್‌ನ ಜಂಟಿ ಸಭೆಯನ್ನು ಉದ್ದೇಶಿಸಿ ಮತ್ತೊಮ್ಮೆ ಮಾತನಾಡಲು ಎದುರು ನೋಡುತ್ತಿದ್ದೇನೆ, ನನ್ನನ್ನು ಆಹ್ವಾನಿಸಿದಕ್ಕೆ ಗೌರರವಿದೆ ಎಂದಿದ್ದಾರೆ. ಯುಎಸ್‌ನೊಂದಿಗಿನ ನಮ್ಮ ಜಾಗತಿಕ ಕಾರ್ಯತಂತ್ರದ ಪಾಲುದಾರಿಕೆ ಬಗ್ಗೆ ಹೆಮ್ಮೆಯಿದೆ ಎಂದು ಹೇಳಿದ್ದಾರೆ.
2016 ರಲ್ಲಿ ಪ್ರಧಾನಿ ಮೋದಿ ಯುಎಸ್ ಕಾಂಗ್ರೆಸ್‌ನ ಜಂಟಿ ಸಭೆ ಉದ್ದೇಶಿಸಿ ಮಾತನಾಡಿದ್ದರು.