ಹೊಸದಿಗಂತ ಡಿಜಿಟಲ್ ಡೆಸ್ಕ್:
ಭಾರತವು ರೂಮಿ1 ಹೆಸರಿನ ತನ್ನ ಮೊದಲ ಮರುಬಳಕೆ ಮಾಡಬಹುದಾದ ಹೈಬ್ರಿಡ್ ರಾಕೆಟ್ನ್ನು ಇಂದು ಯಶಸ್ವಿಯಾಗಿ ಉಡಾವಣೆ ಮಾಡಿದೆ.
ತಮಿಳುನಾಡು ಮೂಲದ ಸ್ಟಾರ್ಟ್-ಅಪ್ ಸ್ಪೇಸ್ ಝೋನ್ ಇಂಡಿಯಾ ಅಭಿವೃದ್ಧಿಪಡಿಸಿದ ಈ ರಾಕೆಟ್ನ್ನು ಚೆನ್ನೈನ ಇಸಿಆರ್‌ನ ತಿರುವಿದಂಧೈನಲ್ಲಿರುವ ಟಿಟಿಡಿಸಿ ಮೈದಾನದಿಂದ ಉಡಾವಣೆ ಮಾಡಲಾಯಿತು. ರಾಕೆಟ್ ಮೂರು ಕ್ಯೂಬ್ ಉಪಗ್ರಹಗಳು ಮತ್ತು ಐವತ್ತು ಪಿಐಸಿಒ ಉಪಗ್ರಹಗಳನ್ನು ಉಪಕಕ್ಷೆಯ ಪಥಕ್ಕೆ ತೆಗೆದುಕೊಂಡು ಹೋಗುತ್ತದೆ. ರಾಕೆಟ್‌ನ ಅದ್ಭುತವಾಗಿ ವಿನ್ಯಾಸ ಮಾಡಲಾಗಿದೆ ಹಾಗೂ ಮರುಬಳಕೆ ಮಾಡಲಾಗಿದೆ.
ಈ ಯೋಜನೆಗೆ ಸಹಾಯ ಮಾಡಿದ ಮಾರ್ಟಿನ್ ಗ್ರೂಪ್, ಮೊಬೈಲ್ ಲಾಂಚರ್ ಬಳಸಿಕೊಂಡು ಉಡಾವಣೆ ನಡೆಸಲಾಗಿದೆ. ಇದು ರಾಕೆಟ್‌ನ ಬಹುಮುಖತೆಯನ್ನು ಇನ್ನಷ್ಟು ಹೆಚ್ಚಿಸುತ್ತದೆ.
#WATCH | India launches its first reusable hybrid rocket, RHUMI 1. The rocket, developed by the Tamil Nadu-based start-up Space Zone India and Martin Group was launched from Thiruvidandhai in Chennai using a mobile launcher. It carries 3 Cube Satellites and 50 PICO Satellites… pic.twitter.com/Io97TvfNhE
— ANI (@ANI) August 24, 2024