ಹೊಸದಿಗಂತ ಡಿಜಿಟಲ್ ಡೆಸ್ಕ್:
ದುಬೈನಲ್ಲಿ ಇಂದಿನಿಂದ ಶುರುವಾಗಿರುವ 19 ವರ್ಷದೊಳಗಿನವರ (ಅಂಡರ್-19) ಏಕದಿನ ಏಷ್ಯಾಕಪ್ ಪಂದ್ಯಾವಳಿಯಲ್ಲಿ ಭಾರತದ ಯುವ ಪಡೆ ಮೊದಲ ಪಂದ್ಯದಲ್ಲೇ ಸಿಡಿಲಬ್ಬರದ ಬ್ಯಾಟಿಂಗ್ ಪ್ರದರ್ಶಿಸಿದೆ. ಆತಿಥೇಯ ಯುಎಇ ತಂಡದ ವಿರುದ್ಧ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಲು ಇಳಿದ ಭಾರತ, ನಿಗದಿತ 50 ಓವರ್‌ಗಳಲ್ಲಿ ಕೇವಲ 6 ವಿಕೆಟ್ ಕಳೆದುಕೊಂಡು ಬರೋಬ್ಬರಿ 433 ರನ್‌ಗಳ ಬೃಹತ್ ಮೊತ್ತ ಕಲೆಹಾಕಿದೆ.
ತಂಡದ ಈ ದಾಖಲೆಯ ಮೊತ್ತಕ್ಕೆ ಮುಖ್ಯ ಕಾರಣ, ಆರಂಭಿಕ ಬ್ಯಾಟ್ಸ್‌ಮನ್ ವೈಭವ್ ಸೂರ್ಯವಂಶಿ ಅವರ ಸ್ಫೋಟಕ ಶತಕ. ವೈಭವ್ ಸೂರ್ಯವಂಶಿ ಅವರು ಯುಎಇ ಬೌಲರ್‌ಗಳನ್ನು ಮನಬಂದಂತೆ ದಂಡಿಸಿ 171 ರನ್‌ಗಳ ಭರ್ಜರಿ ಇನ್ನಿಂಗ್ಸ್ ಆಡಿದರು. ಅವರಿಗೆ ಉತ್ತಮ ಸಾಥ್ ನೀಡಿದ ಆರನ್ ವರ್ಗೀಸ್ ಮತ್ತು ವಿಹಾನ್ ಮಲ್ಹೋತ್ರಾ ಕೂಡ ತಲಾ 69 ರನ್‌ಗಳ ಅಮೂಲ್ಯ ಕೊಡುಗೆ ನೀಡಿದರು.
ಈ ಗೆಲುವಿಗೆ ಯುಎಇ ತಂಡವು 50 ಓವರ್‌ಗಳಲ್ಲಿ 434 ರನ್‌ಗಳ ಸವಾಲಿನ ಗುರಿಯನ್ನು ಬೆನ್ನಟ್ಟಬೇಕಿದೆ.

