ನರ ರಾಕ್ಷಸರ ವಿರುದ್ಧ ಭಾರತ ಮಹಾಸಮರ.. ಮತ್ತೋರ್ವ ಉಗ್ರನ ಮನೆ ಛಿದ್ರ ಛಿದ್ರ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಪಹಲ್ಗಾಮ್‌ ದಾಳಿಗೆ ಪ್ರತೀಕಾರವಾಗಿ ಭದ್ರತಾ ಪಡೆಗಳ ಕಾರ್ಯಾಚರಣೆ ಮತ್ತಷ್ಟು ತೀವ್ರಗೊಂಡಿದೆ. ಉಗ್ರರ ಮನೆಗಳನ್ನು ಧ್ವಂಸ ಮಾಡುತ್ತಿರುವ ಭದ್ರತಾ ಪಡೆಗಳು ಈಗ ಮತ್ತೊಬ್ಬ ಉಗ್ರನ ಮನೆಯನ್ನು ನಾಶಮಾಡಿದೆ.

ಬಂಡಿಪೋರಾದಲ್ಲಿ ಲಷ್ಕರ್-ಎ-ತೈಬಾ ಭಯೋತ್ಪಾದಕ ಜಮೀಲ್ ಅಹ್ಮದ್‌ನ ಮನೆಯನ್ನು ಭದ್ರತಾ ಪಡೆಗಳು ಸ್ಫೋಟಿಸಿವೆ. ಈ ಮೂಲಕ ಒಟ್ಟು 8 ಉಗ್ರರ ಮನೆಗಳನ್ನು ಧ್ವಂಸಗೊಳಿಸಲಾಗಿದೆ.

ಕಳೆದ ಮೂರು ದಿನಗಳಲ್ಲಿ ಜಿಲ್ಲಾ ಅಧಿಕಾರಿಗಳೊಂದಿಗೆ, ಭದ್ರತಾ ಪಡೆಗಳು ಕಣಿವೆಯಾದ್ಯಂತ ಹಲವಾರು ಭಯೋತ್ಪಾದಕರ ಮನೆಗಳನ್ನು ಧ್ವಂಸಗೊಳಿಸುವ ಕಾರ್ಯಾಚರಣೆಯಲ್ಲಿ ತೊಡಗಿದೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!