‘ಆಪರೇಷನ್ ಗಂಗಾ’ದ ಯಶಸ್ಸಿಗೆ ವಿಶ್ವದಲ್ಲಿ ಭಾರತದ ಹೆಚ್ಚುತ್ತಿರುವ ಪ್ರಭಾವ ಕಾರಣ: ಪ್ರಧಾನಿ ಮೋದಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಉಕ್ರೇನ್‌ನಲ್ಲಿ ಸಿಲುಕಿರುವ ಭಾರತೀಯ ನಾಗರಿಕರನ್ನು ಸ್ಥಳಾಂತರಿಸುವ ‘ಆಪರೇಷನ್ ಗಂಗಾ’ದ ಯಶಸ್ಸಿಗೆ ವಿಶ್ವದಲ್ಲಿ ಭಾರತದ ಹೆಚ್ಚುತ್ತಿರುವ ಪ್ರಭಾವವನ್ನು ಸಾಬೀತುಪಡಿಸುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ಭಾನುವಾರ ಹೇಳಿದ್ದಾರೆ.
ಉಕ್ರೇನ್ ಮೇಲೆ ರಷ್ಯಾದ ಆಕ್ರಮಣದ ನಂತರ, ಕೇಂದ್ರ ಸರ್ಕಾರ ಅಲ್ಲಿ ಸಿಲುಕಿರುವ ಭಾರತೀಯ ವಿದ್ಯಾರ್ಥಿಗಳನ್ನು ಸ್ಥಳಾಂತರಿಸಲು ಆಪರೇಷನ್ ಗಂಗಾವನ್ನು ಪ್ರಾರಂಭಿಸಿತು. ಇಲ್ಲಿವರೆಗೆ ಆಪರೇಷನ್ ಗಂಗಾ ಅಡಿಯಲ್ಲಿ ಯುದ್ಧ ಪೀಡಿತ ಉಕ್ರೇನ್‌ನಲ್ಲಿ ಸಿಲುಕಿಕೊಂಡಿದ್ದ 13,700 ನಾಗರಿಕರನ್ನುವಿಶೇಷ ವಿಮಾನಗಳಲ್ಲಿ ಸುರಕ್ಷಿತವಾಗಿ ಕರೆತರಲಾಗಿದೆ.
ವಿಶ್ವದ ಅನೇಕ ದೊಡ್ಡ ದೇಶಗಳು ಸ್ಥಳಾಂತರಿಸಲು ತೊಂದರೆಗಳನ್ನು ಎದುರಿಸುತ್ತಿವೆ. ಆದರೆ ಆಪರೇಷನ್ ಗಂಗಾ ಮೂಲಕ ನಾವು ಸಾವಿರಾರು ಭಾರತೀಯರನ್ನು ಯುದ್ಧ ವಲಯದಿಂದ ಸುರಕ್ಷಿತವಾಗಿ ಸ್ಥಳಾಂತರಿಸುತ್ತಿದ್ದೇವೆ ಎಂದು ಮೋದಿ ಹೇಳಿದ್ದಾರೆ.
ಪುಣೆಯ ಸಿಂಬಯಾಸಿಸ್ ವಿಶ್ವವಿದ್ಯಾಲಯದ ಸುವರ್ಣ ಮಹೋತ್ಸವ ಕಾರ್ಯಕ್ರಮದಲ್ಲಿ ಮಾತನಾಡುತ್ತಿದ್ದ ವೇಳೆ ಮೋದಿ ಹೇಳಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!