spot_img

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Sunday, October 17, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ಲಸಿಕಾ ಅಭಿಯಾನದಲ್ಲಿ ಐತಿಹಾಸಿಕ ದಾಖಲೆ ಭಾರತ: 80 ಕೋಟಿ ಜನರಿಗೆ ವ್ಯಾಕ್ಸಿನೇಷನ್!

- Advertisement -Nitte

ಹೊಸದಿಗಂತ ಆನ್ ಲೈನ್ ಡೆಸ್ಕ್:

ದೇಶದಲ್ಲಿ ನಿನ್ನೆ ಐತಿಹಾಸಿಕ ಲಸಿಕಾ ಅಭಿಮಾನ ನಡೆಯುವ ಮೂಲಕ ದಾಖಲೆ ಬರೆದಿದ್ದು, ಇದುವರೆಗೂ ಒಟ್ಟು 80 ಕೋಟಿ ವ್ಯಾಕ್ಸಿನೇಷನ್ ಹಾಕಲಾಗಿದೆ ಎಂದು ಕೇಂದ್ರ ಆರೋಗ್ಯ ಇಲಾಖೆ ಘೋಷಣೆ ಮಾಡಿದೆ.
ನಿನ್ನೆ ಒಂದೇ ದಿನ ಹೆಚ್ಚು ವ್ಯಾಕ್ಸಿನೇಷನ್​ ಹಾಕಿದ್ದಕ್ಕೆ ಈಗಾಗಲೇ ಪ್ರಧಾನಿ ನರೇಂದ್ರಮೋದಿ ಹರ್ಷ ವ್ಯಕ್ತಪಡಿಸಿದ್ದು, ವೈದ್ಯಕೀಯ ಸಿಬ್ಬಂದಿಗೆ ಅಭಿನಂದನೆ ಸಲ್ಲಿಕೆ ಮಾಡಿದ್ದಾರೆ.
ಇದೀಗ ಒಟ್ಟಾರೆ 80 ಕೋಟಿ ಲಸಿಕೆಗಳನ್ನು ಯಶಸ್ವಿಯಾಗಿ ಹಾಕುವ ಮೂಲಕ ವಿಶೇಷ ಸಾಧನೆ ಮಾಡಿದೆ.
ಸೆಪ್ಟೆಂಬರ್ 17 ರಂದು ಬಿಹಾರ ಮತ್ತು ಕರ್ನಾಟಕದಲ್ಲಿ ಅತಿ ಹೆಚ್ಚು ವ್ಯಾಕ್ಸಿನೇಷನ್​ ಮಾಡಲಾಗಿತ್ತು. ಕರ್ನಾಟಕದಲ್ಲಿ ನಿನ್ನೆ ಒಂದೇ ದಿನ 29.50 ಲಕ್ಷ ಜನರಿಗೆ ಲಸಿಕೆ ಹಾಕಲಾಗಿತ್ತು. ಇನ್ನು ಬಿಹಾರದಲ್ಲೂ 29.60 ಲಕ್ಷ ಲಸಿಕೆಯನ್ನು ಹಾಕಲಾಗಿದೆ.
ಉತ್ತರಪ್ರದೇಶ, ಬಿಹಾರ, ಮಧ್ಯಪ್ರದೇಶದಲ್ಲೂ 25 ಲಕ್ಷಕ್ಕೂ ಹೆಚ್ಚಿನ ಲಸಿಕೆಗಳನ್ನು ಹಾಕಲಾಗಿದೆ.
ಈ ನಡುವೆ ಡಿಸೆಂಬರ್​ ವೇಳೆಗೆ ಮಕ್ಕಳನ್ನು ಬಿಟ್ಟು ಉಳಿದೆಲ್ಲ ನಾಗರಿಕರಿಗೆ ಸಂಪೂರ್ಣವಾಗಿ ಲಸಿಕೆ ಹಾಕುವ ಗುರಿಯನ್ನ ಭಾರತ ಸರ್ಕಾರ ಹೊಂದಿದೆ. ಈ ನಿಟ್ಟಿನಲ್ಲಿ ಇಂದು ಆರೋಗ್ಯ ಇಲಾಖೆ ಎಲ್ಲ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿನ ವ್ಯಾಕ್ಸಿನೇಷನ್​ ಪ್ರಗತಿ ಪರಿಶೀಲಿಸಲು ಹೈ ಲೇವಲ್​ ಸಭೆ ಕರೆದಿದೆ.

- Advertisement -Srinivas collage

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss