ತೀಸ್ತಾ ಪ್ರಕರಣದಲ್ಲಿ ಮೂಗು ತೂರಿಸಲು ಬಂದ ವಿಶ್ವಸಂಸ್ಥೆಯ ಅಂಗಸಂಸ್ಥೆಗೆ ಭಾರತದ ಖಡಕ್ ಪ್ರತಿಕ್ರಿಯೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌
ಸಾಮಾಜಿಕ ಕಾರ್ಯಕರ್ತೆ ತೀಸ್ತಾ ಸೆಟಲ್ವಾಡ್ ಅವರ ಬಂಧನದ ಕುರಿತಾಗಿ ಟೀಕೆಗಳನ್ನು ಮಾಡಿದ್ದ ವಿಶ್ವಸಂಸ್ಥೆಯ ಅಂಗಸಂಸ್ಥೆ ಮಾನವ ಹಕ್ಕುಗಳ ಕಚೇರಿಗೆ ಭಾರತ ಭಾರತವು ತೀಕ್ಷ್ಣವಾಗಿ ತಿರುಗೇಟು ನೀಡಿದೆ. ಮಾನವ ಹಕ್ಕುಗಳ ಸಂಸ್ಥೆಯು ಈ ವಿಚಾರದಲ್ಲಿ ಮಧ್ಯಪ್ರವೇಶಿಸುವುದು ʼಸಂಪೂರ್ಣ ಅನಗತ್ಯʼ ಹಾಗೂ ಇಂತಹ ಹೇಳಿಕೆಗಳು ದೇಶದ ಸ್ವತಂತ್ರ ನ್ಯಾಯಾಂಗ ವ್ಯವಸ್ಥೆಯ ಮೇಲೆ ಹಸ್ತಕ್ಷೇಪ ಮಾಡುವ ಉದ್ದೇಶ ಹೊಂದಿದೆ ಎಂದು ಭಾರತ ಪ್ರತಿಕ್ರಿಯಿಸಿದೆ.
ಸಾಮಾಜಿಕ ಕಾರ್ಯಕರ್ತೆ ತೀಸ್ತಾ ಸೆಟಲ್ವಾಡ್ ಬಂಧನದ ಬಗ್ಗೆ ಕಳವಳ ವ್ಯಕ್ತಪಡಿಸಿದ್ದ ಯುಎನ್ ಮಾನವ ಹಕ್ಕುಗಳ ಹೈ ಕಮಿಷನರ್‌ ಕಚೇರಿಯು, ತೀಸ್ತಾರನ್ನು  ತಕ್ಷಣ ಬಿಡುಗಡೆ ಮಾಡುವಂತೆ ಒತ್ತಾಯಿಸಿತ್ತು. ಗುಜರಾತ್ ಗಲಭೆಯ ಸಂತ್ರಸ್ತರೊಂದಿಗೆ ಸಂಪರ್ಕ ಸಾಧಿಸಿದ್ದಕ್ಕೆ ಆಕೆಗೆ ಕಿರುಕುಳ ನೀಡಬಾರದು ಎಂದು ಮಂಗಳವಾರ ಟ್ವೀಟ್‌ ಮಾಡಿತ್ತು.
ಈ ಬಗ್ಗೆ ಇಂದು ಪ್ರತಿಕ್ರಿಯಿಸಿರುವ ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರ ಅರಿಂದಮ್ ಬಾಗ್ಚಿ, “ತೀಸ್ತಾ ಸೆಟಲ್ವಾಡ್ ಮತ್ತು ಇತರ ಇಬ್ಬರು ವ್ಯಕ್ತಿಗಳ ವಿರುದ್ಧ ಕಾನೂನು ಕ್ರಮಕ್ಕೆ ಸಂಬಂಧಿಸಿದಂತೆ ಮಾನವ ಹಕ್ಕು ಸಂಸ್ಥೆಯ ಹೇಳಿಕೆಗಳನ್ನು ನಾವು ಗಮನಿಸಿದ್ದೇವೆ. ಭಾರತದ ಅಧಿಕಾರಿಗಳು ಕಾನೂನಿನ ಉಲ್ಲಂಘನೆಗಳ ವಿರುದ್ಧ ಕಟ್ಟುನಿಟ್ಟಾದ ನ್ಯಾಯಾಂಗ ಪ್ರಕ್ರಿಯೆಗಳಿಗೆ ಅನುಗುಣವಾಗಿ ಕಾರ್ಯನಿರ್ವಹಿಸುತ್ತಾರೆ ಎಂದು ಪ್ರತಿಪಾದಿಸಿದರು.
ಇಂತಹ ಕಾನೂನಾತ್ಮಕ ಕ್ರಮಗಳನ್ನು ಆರೋಪಿಗೆ ಕಿರುಕುಳ ಎಂಬಂತೆ ಬಿಂಬಿಸುವುದು, ಜನರನ್ನು ತಪ್ಪುದಾರಿಗೆಳೆಯುವುದು ವಿಶ್ವಸಂಸ್ಥೆಯ ಅಂಗಸಂಸ್ಥೆಯ ಘನತೆಗೆ ತಕ್ಕುದ್ದಲ್ಲ ಎಂದು ಅವರು ಹೇಳಿದರು.
2002ರ ಗುಜರಾತ್ ಗಲಭೆಗೆ ಸಂಬಂಧಿಸಿದಂತೆ ಅಮಾಯಕರನ್ನು ಬಂಧಿಸಲು ಸುಳ್ಳು ಸಾಕ್ಷ್ಯವನ್ನು ಸೃಷ್ಟಿಸಿದ ಪ್ರಕರಣದಲ್ಲಿ ಅಹಮದಾಬಾದ್‌ನ ನ್ಯಾಯಾಲಯವು ಭಾನುವಾರ ಸೆಟಲ್ವಾಡ್ ಮತ್ತು ಮಾಜಿ ರಾಜ್ಯ ಪೊಲೀಸ್ ಮಹಾನಿರ್ದೇಶಕ ಆರ್ .ಬಿ ಶ್ರೀಕುಮಾರ್ ಅವರನ್ನು ಜುಲೈ 2 ರವರೆಗೆ ಪೊಲೀಸ್ ಕಸ್ಟಡಿಗೆ ಒಪ್ಪಿಸಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!