ಭಾರತದ ಮೋಸ್ಟ್ ವಾಂಟೆಡ್ ಉಗ್ರ ಅಕ್ರಮ್ ಘಾಜಿ ಪಾಕಿಸ್ತಾನದಲ್ಲಿ ಹತ್ಯೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಭಾರತದ ಮೋಸ್ಟ್ ವಾಂಟೆಂಡ್ ಕ್ರಿಮಿನಲ್, ಲಷ್ಕರ್-ಎ-ತೊಯ್ಬಾ ಉಗ್ರ ಸಂಘಟನೆಯ ಮಾಜಿ ಕಮಾಂಡರ್‌ ಅಕ್ರಮ್ ಘಾಜಿಯನ್ನು ಪಾಕಿಸ್ತಾನದಲ್ಲಿ ಹತ್ಯೆ ಮಾಡಲಾಗಿದೆ.

ಅಪರಿಚಿತ ದುಷ್ಕರ್ಮಿಗಳು ಅಕ್ರಮ್‌ನ್ನು ಗುಂಡಿಕ್ಕಿ ಕೊಂದಿದ್ದಾರೆ. ಪಾಕಿಸ್ತಾನದ ಬಜೌರ್ ಜಿಲ್ಲೆಯಲ್ಲಿ ಹತ್ಯೆಯಾಗಿದ್ದು, ಶೂಟ್ ಮಾಡಿದಾತ ತಕ್ಷಣವೇ ಸ್ಥಳದಿಂದ ಪರಾರಿಯಾಗಿದ್ದಾನೆ.

ಅಕ್ರಮ್ ಹತ್ಯೆಯಲ್ಲಿ ವಿವಿಧ ಭಯೋತ್ಪಾದಕರ ಗುಂಪುಗಳು ಸೇರಿರುವ ಗುಮಾನಿ ಇದೆ, ಲಷ್ಕರ್‌ನ ಕೇಂದ್ರ ನೇಮಕಾತಿ ಸೆಲ್‌ನ ಪ್ರಮುಖ ಸದಸ್ಯನಾಗಿದ್ದ ಅಕ್ರಮ್, ಭಾರತದ ವಿರುದ್ಧ ದ್ವೇಷಕಾರಿ ಭಾಷಣಗಳನ್ನು ಮಾಡುತ್ತಿದ್ದ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!